ನವದೆಹಲಿ: ತೃತೀಯ ರಂಗದ ಸಾರಥ್ಯ ಹೊತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮಾಜಿ ಪ್ರಧಾನಿ ದೇವಗೌಡರನ್ನು ಇಲ್ಲಿನ ಕರ್ನಾಟಕ ಭವನದಲ್ಲಿ ಭೇಟಿಮಾಡಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರನ್ನು ಇಂದು 4.30 ರಲ್ಲಿ ಮಮತಾ ಬ್ಯಾನರ್ಜಿಯವರು ಕರ್ನಾಟಕ ಭವನದಲ್ಲಿ ಭೇಟಿಯಾಗಿ ಒಂದು ಗಂಟೆಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ. ಅಸ್ಸಾಂ ಸರ್ಕಾರದ ಎನ್‌ಆರ್‌ಸಿ ಕರಡು ವಿರೋಧಿಸುತ್ತಿರುವ ಮಮತಾ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದು, ಮಮತಾ ಬ್ಯಾನರ್ಜಿಯವರ ಮನವಿಗೆ ಒಪ್ಪಿಕೊಂಡ ದೇವೇಗೌಡರು ಬೆಂಬಲ ಸೂಚಿಸಿದ್ದಾರೆ.
Advertisement
Advertisement
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ನೂತನವಾಗಿ ಆಯ್ಕೆಗೊಂಡ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಮೊದಲ ಬಾರಿ ದೇವೇಗೌಡರನ್ನು ಭೇಟಿ ಮಾಡಿದ ಅವರು, ತೃತೀಯ ರಂಗ ಬಲ ಪಡಿಸುವ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ.
Advertisement
ಕೇಂದ್ರದಲ್ಲಿರುವ ಎನ್‍ಡಿಎ ಸರ್ಕಾರದ ವಿರುದ್ದ ಹೋರಾಟ ನಡೆಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದು, ಪ್ರಮುಖವಾಗಿ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎನ್ನುವ ವಿಚಾರವಾಗಿ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಇತರೆ ಪ್ರಾದೇಶಿಕ ಪಕ್ಷಗಳ ಒಗ್ಗೂಡಿಸುವಿಕೆಯಲ್ಲಿ ಸಹಾಯ ಮಾಡುವಂತೆ ಮಮತಾ ಬ್ಯಾನರ್ಜಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಾಷ್ಟ್ರೀಯ ನಾಗರಿಕ ನೋಂದಣಿ ಮಾಡಿಸಲು 40 ಲಕ್ಷ ಮಂದಿ ವಿಫಲ: ಏನಿದು ಎನ್‌ಆರ್‌ಸಿ? ಅಸ್ಸಾಂನಲ್ಲೇ ಮಾತ್ರ ಏಕೆ?
Advertisement
ಭೇಟಿ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ ದೇವೇಗೌಡರು ಪ್ರಧಾನಿಯಾಗಿದ್ದಾಗ ನಾನು ಸಂಸದೆಯಾಗಿದ್ದೆ ಅವರ ಮೇಲೆ ಅಪಾರ ಗೌರವಿದ್ದು ಸೌಜನ್ಯಕ್ಕಾಗಿ ಭೇಟಿಯಾಗಿದ್ದೇನೆ. ಭೇಟಿ ವೇಳೆ ಕೆಲವು ರಾಜಕೀಯ ವಿಷಯಗಳ ಬಗ್ಗೆ ಚರ್ಚೆಯಾಗಿದ್ದು, ಪಕ್ಷಗಳ ಒಗ್ಗೂಡಿಸುವಿಕೆ ಹಾಗೂ ಎನ್‌ಆರ್‌ಸಿ ವಿರೋಧಕ್ಕೆ ಬೆಂಬಲಿಸುವಂತೆ ಮನವಿ ಮಾಡಿದ್ದು, ಅದಕ್ಕೆ ದೇವೇಗೌಡರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.