ಕೋಲ್ಕತ್ತಾ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಮತಾ ಬ್ಯಾನರ್ಜಿ ಪರ ಬ್ಯಾಟಿಂಗ್ ಮಾಡಿದರೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ನಾಯಕರು ಟಿಎಂಸಿ ಸರ್ಕಾರದ ವಿರುದ್ಧವೇ ವಾಗ್ದಾಳಿ ನಡೆಸಿದೆ.
ತಪ್ಪಿತಸ್ಥರಲ್ಲದಿದ್ದರೆ ಕೋಲ್ಕತ್ತಾ ಪೊಲೀಸ್ ಆಯುಕ್ತರಾದ ರಾಜೀವ್‍ಕುಮಾರ್ ಅವರು ಸಿಬಿಐ ವಿಚಾರಣೆ ಎದುರಿಸಲು ಹಿಂದೆ ಸರಿಯುತ್ತಿರುವುದು ಏಕೆ ಎಂದು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸೊಮೇಂದ್ರ ನಾಥ್ ಮಿತ್ರಾ ಪ್ರಶ್ನಿಸಿದ್ದಾರೆ.
Advertisement
Advertisement
ಫ್ಯಾಸಿಸ್ಟ್ ಧೋರಣೆಯ ಟಿಎಂಸಿ ಸರ್ಕಾರವನ್ನು ಕಿತ್ತು ಹಾಕಲು ಪಶ್ಚಿಮ ಬಂಗಾಳದಲ್ಲಿ ಎಲ್ಲ ವಿರೋಧ ಪಕ್ಷಗಳು ಒಂದಾಗಿವೆ. ಬಿಜೆಪಿ ಮತ್ತು ಟಿಎಂಸಿ ವಿರುದ್ಧದ ನಮ್ಮ ಹೋರಾಟ ನಿರಂತರವಾಗಿರುತ್ತದೆ ಸೊಮೇನ್ ಮಿತ್ರಾ ಹೇಳಿದ್ದಾರೆ.
Advertisement
ಮಮತಾ ಬ್ಯಾನರ್ಜಿ ವಿಚಾರದಲ್ಲಿ ಕೇಂದ್ರ ನಾಯಕರು ಒಂದು ನಿರ್ಧಾರ ತೆಗೆದುಕೊಂಡರೆ ರಾಜ್ಯ ನಾಯಕರು ವ್ಯತಿರಿಕ್ತ ನಿರ್ಧಾರ ತಳೆದಿರುವುದು ಇದು ತಿಂಗಳಲ್ಲಿ ಎರಡನೇ ಬಾರಿ. ಜ.19ರಂದು ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಆಯೋಜಿಸಿದ್ದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರ ಪ್ರತಿನಿಧಿಯಾಗಿ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಗೈರಾಗಿದ್ದರು.
Advertisement
I spoke with Mamata Di tonight and told her we stand shoulder to shoulder with her.
The happenings in Bengal are a part of the unrelenting attack on India’s institutions by Mr Modi & the BJP.
The entire opposition will stand together & defeat these fascist forces.
— Rahul Gandhi (@RahulGandhi) February 3, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv