ಕೋಲ್ಕತ್ತಾ: ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯ (Narendra Modi) ಅತಿದೊಡ್ಡ ಟಿಆರ್‌ಪಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಿಳಿಸಿದರು.
ತೃಣಮೂಲ ಕಾಂಗ್ರೆಸ್‍ನ ಆಂತರಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕಿಡಿಕಾರಿದರು ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ಪ್ರತಿಪಕ್ಷದ ಮುಖವಾಗಿದ್ದರೇ, ಯಾರೂ ಪ್ರಧಾನಿ ಮೋದಿಯನ್ನು ಟೀಕಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಬಿಜೆಪಿಯು (BJP) ರಾಹುಲ್ ಗಾಂಧಿ (Rahul Gandhi) ಅವರನ್ನು ನಾಯಕನಾಗಿ ಇರಿಸಿಕೊಳ್ಳಲು ಬಯಸುತ್ತದೆ ಎಂದು ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿಯ ವಿಷಯವನ್ನೇ ಮುಂದಿಟ್ಟುಕೊಂಡು ಬಿಜೆಪಿ ಸಂಸತ್ತಿನ ಕಾರ್ಯನಿರ್ವಹಣೆಗೆ ಅವಕಾಶ ನೀಡುತ್ತಿಲ್ಲ. ಸಂಸತ್ತಿನಲ್ಲಿ ಅದಾನಿ ಹಾಗೂ ಎಲ್‍ಐಸಿ ವಿಷಯದ ಬಗ್ಗೆ ಚರ್ಚೆ ನಡೆಯಬೇಕು, ಆದರೆ ಎಲ್‍ಐಸಿ ಹಾಗೂ ಅದಾನಿ ವಿಚಾರದ ಕುರಿತು ಚರ್ಚೆಗಳು ನಡೆಯುತ್ತಿಲ್ಲ. ಗ್ಯಾಸ್ ಬೆಲೆಯ ಬಗ್ಗೆಯೂ ಚರ್ಚೆಯಾಗುತ್ತಿಲ್ಲ, ಇದೆಲ್ಲದರ ನಡುವೆ ಏಕರೂಪ ನಾಗರಿಕ ಸಂಹಿತೆ ಪ್ರತಿಯನ್ನು ಜಾರಿಗೆ ತರಲಾಗಿದೆ. ನಾವು ಏಕರೂಪ ನಾಗರಿಕ ಸಂಹಿತೆಯನ್ನು ಒಪ್ಪುವುದಿಲ್ಲ, ಅದನ್ನು ಜಾರಿಗೆ ತರಲು ನಾವು ಅನುಮತಿಸುವುದಿಲ್ಲ ಎಂದು ಟಿಎಂಸಿ ಕಾರ್ಯಕರ್ತರಿಗೆ ಹೇಳಿದರು.
ಬಿಜೆಪಿಯ ಮುಂದೆ ಕಾಂಗ್ರೆಸ್ (Congress) ತಲೆಬಾಗುತ್ತಿದೆ. ಕಾಂಗ್ರೆಸ್ ಸಿಪಿಎಂ ಹಾಗೂ ಬಿಜೆಪಿಯು ಅಲ್ಪಸಂಖ್ಯಾತರನ್ನು ತೃಣಮೂಲ ಕಾಂಗ್ರೆಸ್‍ನ ವಿರುದ್ಧ ಪ್ರಚೋದಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಬಿಜೆಪಿಯ ಮಿಷನ್ ಬೆಂಗಳೂರು ಟಾಸ್ಕ್‌ಗೆ ಜೀವ – ಮೋದಿ ಮೆಟ್ರೋ ಅಜೆಂಡಾ ಏನು?
ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‍ಗೆ ಅಲ್ಪಸಂಖ್ಯಾತ ಪ್ರಾಬಲ್ಯದ ಸ್ಥಾನವನ್ನು ಕಳೆದುಕೊಂಡಿದೆ. ಈ ಹಿಂದೆ, ತೃಣಮೂಲ ಸಂಸದ ಮತ್ತು ಲೋಕಸಭೆಯ ಪಕ್ಷದ ನಾಯಕ ಸುದೀಪ್ ಬಂಡೋಪಾಧ್ಯಾಯ ಅವರು ರಾಹುಲ್ ಗಾಂಧಿ ಪ್ರತಿಪಕ್ಷದ ಮುಖವಾಗಿರುವುದರಿಂದ ಬಿಜೆಪಿಗೆ ಲಾಭವಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ರೆಡ್ ಸಿಗ್ನಲ್ – ಕೋಲಾರ ಕಾಂಗ್ರೆಸ್‌ನಲ್ಲಿ ಮತ್ತೆ ಆರಂಭವಾಯ್ತು ಗುಂಪುಗಾರಿಕೆ