ಕೋಲ್ಕತ್ತಾ: ಜನರ ಹಿತಕ್ಕಾಗಿ ರಾಜೀನಾಮೆ ನೀಡಲು ಸಿದ್ಧ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರು ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಇಂದು ರಾಜ್ಯ ಸಚಿವಾಲಯದಲ್ಲಿ ಕಿರಿಯ ವೈದ್ಯರೊಂದಿಗೆ ನಡೆದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ಭಾವನಾತ್ಮಕ ಭಾಷಣ ಮಾಡಿದರು. ರಾಜ್ಯದ ಉನ್ನತ ಹುದ್ದೆಗೆ (ಸಿಎಂ ಸ್ಥಾನ) ನಾನು ಆಕರ್ಷಿತಳಾಗಿಲ್ಲ. ಜನರ ಹಿತಕ್ಕಾಗಿ ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿ ಅಬಕಾರಿ ಅಕ್ರಮ: ಶುಕ್ರವಾರ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು
Advertisement
Advertisement
ವೈದ್ಯರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಮಾತುಕತೆಗೆ ಸರ್ಕಾರ ಯಾವಾಗಲೂ ಸಿದ್ಧವಾಗಿದೆ ಎಂದು ವೈದ್ಯರಿಗೆ ಭರವಸೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧದ ಸಂದೇಶಗಳು ಹರಿದಾಡುತ್ತಿರುವುದನ್ನು ಖಂಡಿಸಿದ ಸಿಎಂ, ನಮ್ಮ ಸರ್ಕಾರವನ್ನು ಅವಮಾನಿಸಲಾಗಿದೆ. ಇದರಲ್ಲಿ ರಾಜಕೀಯ ಬಣ್ಣವಿದೆ ಎಂಬುದು ಜನಸಾಮಾನ್ಯರಿಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ.
Advertisement
ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿದಿರುವ ವ್ಯಕ್ತಿಗಳಿಗೆ ಯಾವುದೇ ನ್ಯಾಯ ಬೇಕಿಲ್ಲ. ಅವರಿಗೆ ಕುರ್ಚಿ ಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Uttar Pradesh | ಕಾನ್ಪುರ-ದೆಹಲಿ ಹೈವೇಯಲ್ಲಿ ಮಹಿಳೆಯ ರುಂಡವಿಲ್ಲದ, ಅರೆಬೆತ್ತಲೆ ಶವ ಪತ್ತೆ
Advertisement
ಜನರ ಹಿತದೃಷ್ಟಿಯಿಂದ ನಾನು ಕೆಳಗಿಳಿಯಲು ಸಿದ್ಧಳಿದ್ದೇನೆ. ನನಗೆ ಮುಖ್ಯಮಂತ್ರಿ ಹುದ್ದೆ ಬೇಡ. ತಿಲೋತ್ತಮ್ಮ ಅವರಿಗೆ ನ್ಯಾಯ ಬೇಕು. ಸಾಮಾನ್ಯ ಜನರು ವೈದ್ಯಕೀಯ ಚಿಕಿತ್ಸೆ ಪಡೆಯಬೇಕೆಂದು ನಾನು ಬಯಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.