– ಪಶ್ಚಿಮ ಬಂಗಾಳ ಸಿಎಂ ರಾಜೀನಾಮೆ ನಾಟಕವಾಡುತ್ತಿದ್ದಾರೆ
ಹುಬ್ಬಳ್ಳಿ: ಮಮತಾ ಬ್ಯಾನರ್ಜಿ (Mamata Banerjee) ಅವರ ರಾಜೀನಾಮೆ ಹೇಳಿಕೆ ಕೇವಲ ಡ್ರಾಮಾ. ಜನರೆದುರು ಈ ರೀತಿ ಕಣ್ಣಾ ಮುಚ್ಚಾಲೆ ಆಡುವುದು ಬೇಡ. ಬದಲಿಗೆ ರಾಜೀನಾಮೆ ನೀಡಲಿ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಟೀಕಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮಮತಾ ಅವರು ರಾಜೀನಾಮೆಯ ನಾಟಕವಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಆಗಿ ಸರ್ಕಾರ ಮುನ್ನಡೆಸಲು ಅವರು ಸಮರ್ಥರಿಲ್ಲ. ಸಮರ್ಪಕ ಆಡಳಿತ ನೀಡುವಲ್ಲಿ ಅವರು ಅಸಮರ್ಥರಾಗಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಆಗ್ರಾ ನಗರಕ್ಕೆ ವಿಶ್ವ ಪರಂಪರೆಯ ತಾಣ ನೀಡುವಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ಅಧಿಕಾರ ನೀಡಿದ ಜನರಿಗೆ ನ್ಯಾಯ ಒದಗಿಸುವಲ್ಲಿ ಸಹ ವೈಫಲ್ಯ ಕಂಡಿದ್ದಾರೆ. ಸಮುದಾಯಕ್ಕೆ ಅವಮಾನ ಮಾಡುತ್ತಲೇ ಬಂದಿದ್ದಾರೆ. ಇದೇ ಪ್ರವೃತ್ತಿ ಮುಂದುವರಿಸುವ ಬದಲು ರಾಜೀನಾಮೆ ನೀಡುವುದೇ ಸೂಕ್ತ ಎಂದು ಜೋಶಿ ತಿಳಿಸಿದರು. ಇದನ್ನೂ ಓದಿ: ಭೂಮಿಯ ಸುತ್ತ ಹೊಮ್ಮಿತು ನಿಗೂಢ ಸಿಗ್ನಲ್ – ವಿಜ್ಞಾನಿಗಳಲ್ಲಿ ಅಚ್ಚರಿ
ದೆಹಲಿ ಸಿಎಂ ಆಗಿದ್ದ ಅರವಿಂದ ಕೇಜ್ರಿವಾಲ್ (Arvind Kejriwal) ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ, ಅವರಿನ್ನೂ ದೋಷಮುಕ್ತರಾಗಿ ಹೊರ ಬಂದಿಲ್ಲ ಎಂದರು. ಇದನ್ನೂ ಓದಿ: ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ – ಬಹಿರಂಗವಾಗಿಯೇ ಸಿದ್ದರಾಮಯ್ಯ ಘೋಷಣೆ