ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮತ್ತೆ ಅಧಿಕಾರಕ್ಕೆ ಏರಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಅವರು, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ಮೊರೆ ಹೋಗಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಭಾರೀ ಹಿನ್ನಡೆ ಕಂಡ ಮಮತಾ ಬ್ಯಾನರ್ಜಿ 2021ರಲ್ಲಿ ನಡೆಯುವ ರಾಜ್ಯ ಚುನಾವಣೆ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಪ್ರಶಾಂತ್ ಕಿಶೋರ್ ಅವರ ಜೊತೆಗೆ 2 ಗಂಟೆಗಳ ಕಾಲ ಸುದೀರ್ಘ ಮಾತುಕತೆ ನಡೆಸಿದ್ದಾರೆ.
Advertisement
Advertisement
ಪ್ರಶಾಂತ್ ಕಿಶೋರ್ ಮಮತಾ ಬ್ಯಾನರ್ಜಿ ಪರ ಕೆಲಸ ಮಾಡಲು ಒಪ್ಪಿಕೊಂಡಿದ್ದು ಜುಲೈ ಬಳಿಕ ಚುನಾವಣಾ ಪ್ರಚಾರದ ತಂತ್ರಗಾರಿಕೆ ರೂಪಿಸಲಿದ್ದಾರೆ ಎಂದು ವರದಿಯಾಗಿದೆ.
Advertisement
2014ರ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ ಕೇವಲ 2 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಆದರೆ ಈ ಬಾರಿ ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಮೇಲೆ ಹೆಚ್ಚು ಗಮನ ಕೇಂದ್ರಿಕರಿಸಿತ್ತು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೀದಿ ನಾಡಿನಲ್ಲಿ 17 ಬೃಹತ್ ಸಮಾವೇಶ ಕೈಗೊಂಡಿದ್ದರು. ಎಲ್ಲ ಪ್ರಯತ್ನಗಳ ಮೂಲಕ ಬಿಜೆಪಿಯು 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ 34 ಕ್ಷೇತ್ರಗಳಲ್ಲಿ ಜಯ ಕಂಡಿದ್ದ ಟಿಎಂಸಿ ಈ ಬಾರಿ 22 ಸ್ಥಾನಕ್ಕೆ ಕುಸಿದಿದೆ. ಈ ಫಲಿತಾಂಶ ವಿಧಾನಸಭಾ ಚುನಾವಣೆ ಮೇಲೆ ಬೀರತ್ತದೆ ಎಂಬ ಭಯ ಮಮತಾ ಬ್ಯಾನರ್ಜಿ ಅವರಿಗೆ ಶುರುವಾಗಿದೆ.
Advertisement
ಪ್ರಶಾಂತ್ ಕಿಶೋರ್ ಯಾರು?:
2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್ ನಂತರ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡು ಗೆಲುವಿನ ರೂವಾರಿಯಾಗಿದ್ದರು. ಈ ಕಾರಣಕ್ಕಾಗಿ ಪ್ರಶಾಂತ್ ಕಿಶೋರ್ ಅವರಿಗೆ ರಾಹುಲ್ ಗಾಂಧಿ ಉತ್ತರ ಪ್ರದೇಶ ಚುನಾವಣೆ ಉಸ್ತುವಾರಿ ವಹಿಸಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಕೆಗೆ ಸೋಲಾಗಿತ್ತು. ಮೇಲ್ವರ್ಗದ ಮತಗಳನ್ನು ಸೆಳೆಯುವ ಉದ್ದೇಶ ಮತ್ತು ಕಾಂಗ್ರೆಸ್ ಯಾವಾಗಲೂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪಕ್ಷ ಎನ್ನುವ ಕಲ್ಪನೆಯಿಂದ ಹೊರಬರಲು ಪ್ರಶಾಂತ್ ಕಿಶೋರ್ ಅವರು ಈ ಬ್ರಾಹ್ಮಣ ಸಮುದಾಯ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಶೀಲಾ ದೀಕ್ಷಿತ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಸಲಹೆ ನೀಡಿದ್ದರು. ಈ ಸಲಹೆಗೆ ಕಾಂಗ್ರೆಸ್ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು.
2014ರ ಚುನಾವಣೆಯ ವೇಳೆ ಪ್ರಶಾಂತ್ ಕಿಶೋರ್ ಸಲಹೆಯಂತೆ ಚಾಯ್‍ಪೇ ಚರ್ಚಾ ಬಿಜೆಪಿಗೆ ಭಾರೀ ಯಶಸ್ಸನ್ನು ತಂದುಕೊಟ್ಟಿತ್ತು. ಇದಾದ ಬಳಿಕ ಅಮಿತ್ ಶಾ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಪ್ರಶಾಂತ್ ಕಿಶೋರ್ ಬಿಜೆಪಿ ಪಾಳೆಯವನ್ನು ತೊರೆದಿದ್ದರು. ಬಿಹಾರದಲ್ಲಿ ಮಹಾಮೈತ್ರಿಕೂಟ ನಡೆಸಿ ನಿತೀಶ್ ಕುಮಾರ್ ಅವರನ್ನು ಪ್ರಶಾಂತ್ ಕಿಶೋರ್ ಗೆಲ್ಲಿಸಿದ್ದರು. 2017ರ ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಪ್ರಶಾಂತ್ ಕಿಶೋರ್ ತಂಡ ಕಾಂಗ್ರೆಸ್‍ನೊಂದಿಗೆ ಕೈಜೋಡಿಸಿತ್ತು. ಆಗಲೂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಎದುರಾಳಿಯನ್ನ ಮಣಿಸಿ ಅಧಿಕಾರ ಹಿಡಿದರು. ಹಲವು ವರ್ಷಗಳಿಂದ ಚುನಾವಣೆಯಲ್ಲಿ ಸತತ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಈ ಗೆಲುವು ಸಮಾಧಾನ ತಂದುಕೊಟ್ಟಿತ್ತು.
ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿಯೂ ಪ್ರಶಾಂತ್ ಕಿಶೋರ್ ತಮ್ಮ ರಾಜಕೀಯ ಚತುರತೆ ತೋರಿದ್ದರು. ಜಗನ್‍ಮೋಹನ್ ರೆಡ್ಡಿ ಅವರ ಶ್ರಮ ಹಾಗೂ ಪ್ರಶಾಂತ್ ತಂತ್ರಗಾರಿಕೆ ಪರಿಣಾಮ ವೈಎಸ್‍ಆರ್ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರ ಹಿಡಿದಿದೆ.