ಕೋಲ್ಕತ್ತಾ: ವಿಷಪೂರಿತ ಹಾವಿಗಿಂತ ಬಿಜೆಪಿ ಅಪಾಯಕಾರಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಾಗ್ದಾಳಿ ನಡೆಸಿದ್ದಾರೆ.
ಬಂಗಾಳದ (West Bengal) ಕೂಚ್ ಬೆಹಾರ್‌ನಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಒಂದು ರಾಷ್ಟ್ರ, ಒಂದು ಪಕ್ಷ ಎಂಬ ತತ್ವವನ್ನು ಬಿಜೆಪಿ (BJP) ಅನುಸರಿಸುತ್ತಿದೆ. ಬಿಜೆಪಿ ದೇಶವನ್ನು ನಾಶ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನು ಹೇಗೆ ಗೌರವಿಸಬೇಕೆಂಬುದನ್ನು ಮೋದಿ ನೋಡಿ ಕಲಿಯಿರಿ: ಹೇಮಾ ಮಾಲಿನಿ
ಕೇಂದ್ರೀಯ ತನಿಖಾ ಸಂಸ್ಥೆಗಳಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಿಜೆಪಿಯ ಆಜ್ಞೆಯಂತೆ ಕೆಲಸ ಮಾಡುತ್ತಿವೆ. ಕೇಂದ್ರೀಯ ಸಂಸ್ಥೆಗಳು ಕೇಸರಿ ಶಿಬಿರಕ್ಕಾಗಿ ಕೆಲಸ ಮಾಡುತ್ತಿವೆ. ಬಿಜೆಪಿ ಎಂಸಿಸಿಯನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಮಾಜಿ ಕೂಚ್ ಬೆಹಾರ್ ಎಸ್.ಪಿ.ದೇಬಾಶಿಸ್ ಧಾರ್ ಅವರನ್ನು ಬಿರ್ಹಮ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿದೆ. 2021 ರ ವಿಧಾನಸಭಾ ಚುನಾವಣೆಯಲ್ಲಿ ಐದು ಜನರನ್ನು ಕೊಂದಿದ್ದಕ್ಕೆ ಧಾರ್ ಕಾರಣ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಮಾತೃಶಕ್ತಿಗೆ ಮಾಡಿದ ಅವಮಾನ- ಸುರ್ಜೇವಾಲಾ ವಿರುದ್ಧ ಯೋಗಿ ಕಿಡಿ
ಕೂಚ್ ಬೆಹಾರ್ ಜಿಲ್ಲೆ ಗುರುವಾರ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ಲೋಕಸಭೆಯ ಚುನಾವಣಾ ಪ್ರಚಾರದ ಸಮರಕ್ಕೆ ಸಾಕ್ಷಿಯಾಯಿತು.