ತಿರುವನಂತಪುರಂ: ನಟ ಮಮ್ಮುಟ್ಟಿಗೆ ಕೋವಿಡ್-19 ಪಾಸಿಟಿವ್ ಬಂದಿದೆ, ಈ ಹಿನ್ನೆಲೆಯಲ್ಲಿ ಸಿಬಿಐ 5ರ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ.
ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ (ಜನವರಿ 16) ಇಂದು ಕೋವಿಡ್ ಪಾಸಿಟಿವ್ ಬಂದಿದೆ. ಅವರು ಹೋಮ್ ಕ್ವಾರಂಟೈನ್‍ನಲ್ಲಿದ್ದಾರೆಯೇ ಅಥವಾ ಕೇರಳದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಯೇ ಎಂಬುದು ಸ್ಪಷ್ಟವಾಗಿರಲಿಲ್ಲ. ಅವರ ಆರೋಗ್ಯದ ಮಾಹಿತಿ ಬಗ್ಗೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹುಡುಕಾಡುತ್ತಿದ್ದರು. ಮಮ್ಮುಟ್ಟಿ ಅವರೆ ಟ್ವೀಟ್ ಮಾಡಿ ಆರೋಗ್ಯದ ಕುರಿತಾಗಿ ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ನಾನು ನಿನ್ನೆ ಕೋವಿಡ್ ಪಾಸಿಟಿವ್ ಪರೀಕ್ಷೆ ಮಾಡಿದ್ದೇನೆ. ಸ್ವಲ್ಪ ಜ್ವರ ಇದೆ. ನಾನು ಚೆನ್ನಾಗಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳ ನಿರ್ದೇಶನದಂತೆ ನಾನು ಮನೆಯಲ್ಲಿ ಸ್ವಯಂ ಪ್ರತ್ಯೇಕವಾಗಿದ್ದೇನೆ. ನೀವೆಲ್ಲರೂ ಸುರಕ್ಷಿತವಾಗಿರಬೇಕೆಂದು ನಾನು ಬಯಸುತ್ತೇನೆ. ಎಲ್ಲಾ ಸಮಯದಲ್ಲೂ ಮಾಸ್ಕ್ ಬಳಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಇದನ್ನೂ ಓದಿ: ಆತ್ಮಹತ್ಯೆ ಬಗ್ಗೆ ಸ್ಪಷ್ಟನೆ ಕೊಟ್ಟ ನಟಿ ಭಾಮ
Despite taking all the necessary precautions I have tested Covid Positive yesterday. Besides a light fever I am otherwise fine. I am self isolating at home as per the directions of the concerned authorities. I wish for all of you to stay safe. Mask at all times and take care.
— Mammootty (@mammukka) January 16, 2022
ಮುಂಬರುವ ಅವರ ಸಿನಿಮಾಗೆ ತಾತ್ಕಾಲಿಕವಾಗಿ ಸಿಬಿಐ 5 ಎಂದು ಹೆಸರಿಸಲಾಗಿದೆ. ಸಿಬಿಐ 5ರ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಮಮ್ಮುಟ್ಟಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಾರೈಸಿದ್ದಾರೆ. ಇದನ್ನೂ ಓದಿ: 4.50 ಕೋಟಿ ರೂ. ಹಳೆಯ ಕರೆನ್ಸಿಯೊಂದಿಗೆ ಸಿಕ್ಕಿಬಿದ್ದ 6 ಮಂದಿ ವಶ