ಚಂಡೀಗಢ: ಅಮೃತಸರದ ಸ್ವರ್ಣ ಮಂದಿರವನ್ನು ಅಪವಿತ್ರಗೊಳಿಸಲು ಯತ್ನಿಸಿದ ಆರೋಪ ಕೇಳಿಬಂದ ಹಿನ್ನೆಲೆ ಯುವಕನೋರ್ವನನ್ನು ಕೋಪ್ರೋದ್ರಿಕ್ತರು ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.
ಪ್ರತಿನಿತ್ಯ ಸಂಜೆ ನಡೆಯುವ ಪ್ರಾರ್ಥನೆ ವೇಳೆ ರೇಲಿಂಗ್( ಕಬ್ಬಿಣದ ಸರಪಳಿಯನ್ನು) ದಾಟಿ, ಆ ಸ್ಥಳಕ್ಕೆ ಜಿಗಿದು ಬಂದ ವ್ಯಕ್ತಿಯೋರ್ವ ಗುರು ಗ್ರಂಥ ಸಾಹೀಬ್ (ಸಿಖ್ ಧರ್ಮದ ಪವಿತ್ರವಾದ ಗ್ರಂಥ) ಬಳಿ ಇರಿಸಲಾದ ಖಡ್ಗವನ್ನು ಎತ್ತಿಕೊಳ್ಳಲು ಪ್ರಯತ್ನಿಸಿದ್ದಾನೆ.
Advertisement
Advertisement
ಈ ವೇಳೆ ಕರ್ತವ್ಯನಿರತ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಕೊಠಡಿಗೆ ಎಳೆದೊಯ್ದು ವಿಚಾರಣೆ ನಡೆಸಿ ತೀವ್ರವಾಗಿ ಥಳಿಸಿದ್ದಾರೆ. ಇದರಿಂದ ಗಂಭೀರವಾಗಿ ಹಲ್ಲೆಗೆ ಒಳಗಾದ ವ್ಯಕ್ತಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರುವುದಿಲ್ಲ: ಓವೈಸಿ
Advertisement
ಈ ಕೃತ್ಯ ಕುರಿತಂತೆ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯ (ಎಸ್‍ಜಿಪಿಸಿ) ಕಾರ್ಯನಿರ್ವಾಹಕ ಸದಸ್ಯ ಭಾಯಿ ಗುರುಪ್ರೀತ್ ಸಿಂಗ್ ರಾಂಧವಾ ಅವರು, ಅಮೃತಸಾರದ ಸ್ವರ್ಣ ಮಂದಿರದಲ್ಲಿ ನಡೆದ ಈ ಅಹಿತಕರವಾದ ಘಟನೆಯನ್ನು ನಾನು ಖಂಡಿಸುತ್ತೇನೆ. ಪಂಜಾಬ್ ಸರ್ಕಾರ ಈ ವಿಚಾರವಾಗಿ ತಕ್ಷಣವೇ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
Advertisement
An alleged attempt of sacrilege by a young person reported inside sanctum sanctorum of Sri Darbar Sahib, Amritsar today evening.@SGPC sevadar apprehended the accused , police was also called at #SGPC office for further action aganist the accused.#GoldenTemple
v @PTC_Network pic.twitter.com/VsPOC0GtvJ
— Ravinder Singh Robin ਰਵਿੰਦਰ ਸਿੰਘ رویندرسنگھ روبن (@rsrobin1) December 18, 2021
ದಿನ ನಿತ್ಯ ಪ್ರಾರ್ಥನೆಯು ವಾಹಿನಿಯೊಂದರಲ್ಲಿ ನೇರ ಪ್ರಸಾರವಾಗುವುದರಿಂದ ಈ ದೃಶ್ಯಾವಳಿಗಳು ಪ್ರಸಾರವಾಗಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಪೊಲೀಸರ ಸರ್ಪಗಾವಲಿನಲ್ಲಿ ಶಾಂತಿಯುತವಾಗಿ ತೆರೆಕಂಡ ಕಾಫಿನಾಡ ಶೋಭಾಯಾತ್ರೆ
ಈ ಕುರಿತಂತೆ ಪ್ರತಿಕ್ರಿಯಿಸಿರುವ ಅಮೃತಸರ ಪೊಲೀಸ್ ಆಯುಕ್ತರು ಆ ವ್ಯಕ್ತಿ ದೈವ ನಿಂದನೆಗೆ ಯತ್ನಿಸಿದ್ದರಿಂದ ಸಾರ್ವಜನಿಕರು ಆತನನ್ನು ತೀವ್ರವಾಗಿ ಥಳಿಸಿದ್ದಾರೆ, ಇದೀಗ ವ್ಯಕ್ತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆತ ಯಾರು? ಎಲ್ಲಿಂದ ಬಂದಿದ್ದಾನೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.