ನವದೆಹಲಿ: ರಾಷ್ಟ್ರ ರಾಜಧಾನಿಯ ರೋಹಿಣಿ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್ನಲ್ಲೇ ಕಾಮುಕನೊಬ್ಬ ಹುಡುಗಿಯ ಮುಂದೆ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಡಿಟಿಸಿ ಮಾರ್ಷಲ್ (DTC marshal) ಆರೋಪಿಸಿದ್ದಾರೆ.
ಸದ್ಯ ಡಿಟಿಸಿ ಆರೋಪಿಸಿದ ವೀಡಿಯೋ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ. ಆದ್ರೆ ಇನ್ನೂ ದೂರು ದಾಖಲಾಗದೇ ಇರುವುದರಿಂದ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಕುಕ್ಕರ್ ಸ್ಫೋಟ ಕೇಸ್ – ಮಂಗಳೂರಿನ ಎಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ, ಓರ್ವ ವಶ
Advertisement
Advertisement
ಏನಿದು ಘಟನೆ?
ಇಲ್ಲಿನ ರೋಹಿಣಿ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್ನಲ್ಲಿ (Bus) ಹುಡುಗಿಯ ಮುಂದೆಯೇ ಕಾಮುಕನೊಬ್ಬ ಹಸ್ತ ಮೈಥುನ ಮಾಡಿಕೊಂಡಿದ್ದಾನೆ. ಹುಡುಗಿ ಕಿರುಚಿಕೊಂಡಾಗ ಮಾರ್ಷಲ್ ಸಂದೀಪ್ ಚಕಾರ ಆತನನ್ನ ಹಿಡಿದಿದ್ದಾರೆ. ಇದನ್ನೂ ಓದಿ: ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್ನ್ನು ಅಲ್ಲಾಡಿಸಲು ಆಗಲ್ಲ: ನಿಖಿಲ್ ಕುಮಾರಸ್ವಾಮಿ
Advertisement
Advertisement
ಆರೋಪಿ ಬಿಹಾರದ ನಿವಾಸಿಯಾಗಿದ್ದು, ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಆದ್ರೆ ಯಾರೊಬ್ಬರು ದೂರು ನೀಡದ ಕಾರಣ ಆತನನ್ನು ಬಂಧಿಸಿಲ್ಲ. ಬುಧವಾರ ರೋಹಿಣಿ ಠಾಣೆಯ ಪೊಲೀಸ್ ಸಬ್ಇನ್ಸ್ಪೆಕ್ಟರ್ ಸುಮನ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಆದ್ರೆ ಸಂತ್ರಸ್ತೆ ದೂರು ನೀಡಲು ನಿರಾಕರಿಸಿದ್ದಾಳೆ. ಭವಿಷ್ಯದಲ್ಲಿ ಆಪಾಧಿತನ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದಲ್ಲಿ, ಸೂಕ್ತ ಸೆಕ್ಷನ್ಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k