ಭೋಪಾಲ್: 45 ವರ್ಷದ ತನ್ನ ತಾಯಿಯ ಮೇಲೆ 30 ವರ್ಷದ ಮಗ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಮಧ್ಯ ಪ್ರದೇಶದ ಬರ್ವಾನಿ ಜಿಲ್ಲೆಯ ಸುರನಿ ಗ್ರಾಮದಲ್ಲಿ ನಡೆದಿದೆ.
ಈ ಘಟನೆ ಸೆಪ್ಟಂಬರ್ 2ರಂದು ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಮನೆಯಲ್ಲಿ ಮಲಗಿದ್ದರು. ಈ ವೇಳೆ ಆರೋಪಿ ಮಗ ಏಕಾಏಕಿ ತಾಯಿಯ ಮೇಲೆರಗಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆರೋಪಿ ತಾಯಿಯ ಕುತ್ತಿಗೆಗೆ ಕುಡುಗೋಲು ಹಾಕಿ ಅತ್ಯಾಚಾರ ಎಸಗಿದ್ದಾನೆ ಎಂದು ಪೋಲಿಸ್ ಸ್ಟೇಶನ್ ಇನ್ ಚಾರ್ಜ್ ದಿನೇಶ್ ಚೌಹಾಣ್ ಹೇಳಿದ್ದಾರೆ.
ಆರೋಪಿಯ ಪತ್ನಿ ಎರಡು ವರ್ಷಗಳ ಹಿಂದೆ ಈತನನ್ನು ಬಿಟ್ಟು ಹೋಗಿದ್ದರು. ಬಳಿಕ ಈತ ತನ್ನ ಮೂವರು ಮಕ್ಕಳೊಂದಿಗೆ ಪೋಷಕರೊಂದಿಗೆ ವಾಸಿಸುತ್ತಿದ್ದನು. ಅಷ್ಟೇ ಅಲ್ಲದೇ ಆರೋಪಿಯ ಏಳು ವರ್ಷದ ಮಗ ಈ ಘಟನೆಯನ್ನು ನೋಡಿದ್ದಾನೆ. ಆದರೆ ಭಯದಿಂದ ಈ ಬಗ್ಗೆ ಹೇಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆ ಕಾಮುಕ ಮಗನಿಂದ ತಪ್ಪಿಸಿಕೊಂಡು ತನ್ನ ಮೂವರು ಮೊಮ್ಮಕ್ಕಳೊಂದಿಗೆ ಸಂಬಂಧಿಕರ ಮನೆಗೆ ಬಂದಿದ್ದಾರೆ. ಬಳಿಕ ಅವರ ಸಹಾಯ ಪಡೆದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯಕ್ಕೆ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಚೌಹಾಣ್ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv