ತಿರುವನಂತಪುರಂ: ಚಲಿಸುತ್ತಿದ್ದ ರೈಲಿನಲ್ಲಿ ಅನಾಮಿಕನೊಬ್ಬ ಸಹ ಪ್ರಯಾಣಿಕನಿಗೆ (Co-Passenger) ಬೆಂಕಿ (Fire) ಹಚ್ಚಿದ ಘಟನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿನಲ್ಲಿ (Train) ನಡೆದಿದೆ.
ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲು ಕೋಝಿಕ್ಕೋಡ್ ನಗರವನ್ನು ದಾಟಿ ಕೇರಳದ (Kerala) ಕೊರಾಪುಳ ರೈಲ್ವೆ ಸೇತುವೆಯನ್ನು ತಲುಪಿತ್ತು. ಈ ವೇಳೆ ಅನಾಮಿಕನೊಬ್ಬ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ, ನಂತರ ಆತನಿಗೆ ಬೆಂಕಿ ಹಚ್ಚಿದ ಪರಿಣಾಮ 9 ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
Advertisement
Advertisement
ರೈಲು ಕಣ್ಣೂರು ತಲುಪಿದಾಗ, ಘಟನೆಯ ನಂತರ ಮಹಿಳೆ ಮತ್ತು ಮಗು ಕಾಣೆಯಾಗಿದೆ ಎಂದು ಕೆಲವು ಪ್ರಯಾಣಿಕರು ದೂರಿದರು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಮಹಿಳೆ ಹಾಗೂ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮಹಿಳೆ, ಮಗು ಹಾಗೂ ಓರ್ವ ವ್ಯಕ್ತಿಯ ಮೃತದೇಹಗಳು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಬೆಂಕಿಯನ್ನು ನೋಡಿದ ನಂತರ ಆ ಮೂವರು ರೈಲಿನಿಂದ ಇಳಿಯಲು ಪ್ರಯತ್ನಿಸಿ ಬಿದ್ದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ FIR ದಾಖಲು
Advertisement
Advertisement
ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಆರೋಪಿ ಇನ್ನೂ ಪತ್ತೆ ಆಗಿಲ್ಲ. ಆದರೆ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದು, ಸಿಸಿಟಿವಿಗಳನ್ನು ಪರಿಶೀಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೇವಿಗೆ ವಿದ್ಯುತ್ ತಂತಿ ಸ್ಪರ್ಶ- ಟ್ರ್ಯಾಕ್ಟರ್ ಭಸ್ಮ