ಭೋಪಾಲ್: ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ಮತದಾನದ ವೇಳೆ ಹಂಚಿಕೆ ಮಾಡಿದ್ದ ಹಣವನ್ನು ಹಿಂದಿರುಗಿಸುವಂತೆ ಜನರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಪಂಚಾಯತ್ ಚುನಾವಣೆಯಲ್ಲಿ ಸೋತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಚುನಾವಣೆಯಲ್ಲಿ ಸೋತ ವ್ಯಕ್ತಿ ರಾಜು ದೈಮಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇಲ್ಲಿನ ದೇವರಾನ್ ಗ್ರಾಮ ಪಂಚಾಯತ್‌ನ ಸರಪಂಚ್ ಹುದ್ದೆಗೆ ನಡೆದ ಚುನಾವಣೆಯಲ್ಲಿ ರಾಜು ದೈಮಾ ಸೋತಿದ್ದ. ಚುನಾವಣೆ ವೇಳೆ ಹಂಚಿದ್ದ ಹಣವನ್ನು ಹಿಂದಿರುಗಿಸುವಂತೆ ಜನರನ್ನು ಪೀಡಿಸುತ್ತಿದ್ದ. ಈ ದೃಶ್ಯದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮುಂದಿನ ವಾರ ಸೂಕ್ತ ಪೀಠದಲ್ಲಿ ಹಿಜಬ್ ಅರ್ಜಿ ವಿಚಾರಣೆ – ಸುಪ್ರೀಂಕೋರ್ಟ್
Advertisement
Advertisement
ಆರೋಪಿಯು ಜನರಿಗೆ ಬೆದರಿಕೆ ಹಾಕಿರುವುದರ ಜೊತೆಗೆ ಕೆಲವರ ಮೇಲೆ ಹಲ್ಲೆ ನಡೆಸಿರುವ ಬಗ್ಗೆಯೂ ದೂರು ದಾಖಲಾಗಿದೆ. ಹೀಗಾಗಿ ದೈಮಾ ಮತ್ತು ಆತನ ಸಹಚರ ಕನ್ಹಯ್ಯ ಬಂಜಾರಾ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ಸಿಂಗ್ ಕಾಲೇಶ್ ತಿಳಿಸಿದ್ದಾರೆ.
Advertisement
Advertisement
ಚುನಾವಣೆ ವೇಳೆ ಹಣ ಹಂಚಿಕೆ ಮಾಡಿರುವುದಕ್ಕೆ ಆರೋಪಿ ವಿರುದ್ಧ ಹೆಚ್ಚಿನ ಆರೋಪಗಳನ್ನು ಹೊರಿಸಬಹುದು ಎಂದು ಎಎಸ್‌ಪಿ ಹೇಳಿದ್ದಾರೆ. ಇದನ್ನೂ ಓದಿ: ಪತ್ನಿ, ಅತ್ತೆ ಮೇಲೆ ಗುಂಡು ಹಾರಿಸಿ ಸಂತ್ರಸ್ತನಂತೆ ನಾಟಕವಾಡಿದ
ಮೂಲಗಳ ಪ್ರಕಾರ, ಪಂಚಾಯಿತಿ ಚುನಾವಣೆಯಲ್ಲಿ ಸೋತ ನಂತರ ಆರೋಪಿಯು ಜನರಿಂದ ಸುಮಾರು 4 ಲಕ್ಷ ರೂ. ವಸೂಲಿ ಮಾಡಿದ್ದಾನೆ.