Wednesday, 17th July 2019

ಯುವತಿ ಸ್ನಾನ ಮಾಡೋವಾಗ ರೆಕಾರ್ಡ್ – ಬ್ಲ್ಯಾಕ್‍ಮೇಲ್ ಮಾಡಿ ವಿವಾಹಿತನಿಂದ ರೇಪ್

ರಾಯ್ಪುರ್: 34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ.

22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ ಪೂಜಾರಿ ತಿಳಿಸಿದ್ದಾರೆ.

ಆರೋಪಿ ರವಿ ಕನ್ನೌಜೆ ಈಗಾಗಲೇ ಮದುವೆಯಾಗಿದ್ದಾನೆ. ಕಳೆದ ವರ್ಷ ಯುವತಿಯ ಮನೆಗೆ ಭೇಟಿ ನೀಡಿದ್ದನು. ಆಗ ಯುವತಿ ಸ್ನಾನ ಮಾಡುವಾಗ ರಹಸ್ಯವಾಗಿ ತನ್ನ ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದನು. ನಂತರ ಆತ ವಿಡಿಯೋ ಮೂಲಕ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ಒಂದು ವರ್ಷದಲ್ಲಿ ಯುವತಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಯುವತಿ ಅಶ್ಲೀಲ ವಿಡಿಯೋಗಳನ್ನು ಕೂಡ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚೆಗೆ ಯುವತಿ ಆರೋಪಿ ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ವಿರೋಧಿಸಿದ್ದಾಳೆ. ಆಗ ಆರೋಪಿ ಕೋಪಗೊಂಡು ಆ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದಾಳೆ ಎಂದು ಪೂಜಾರಿ ಹೇಳಿದ್ದಾರೆ.

ಸದ್ಯಕ್ಕೆ ರವಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ) ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *