ಬೆಂಗಳೂರು: ರಸ್ತೆ ಮಧ್ಯೆ ಚಯರ್ ಹಾಕಿಕೊಂಡು ಟೀ ಕುಡಿಯುತ್ತಾ ರೀಲ್ಸ್ (Reels) ಮಾಡಿ ಹುಚ್ಚಾಟ ಮಾಡಿದವನಿಗೆ ಬೆಂಗಳೂರು ಪೊಲೀಸರು (Bengaluru Police) ಬಿಸಿ ಮುಟ್ಟಿಸಿದ್ದಾರೆ.
ಪ್ರಚಾರದ ತೆವಲಿಗೆ ಕಳೆದ ಏಪ್ರಿಲ್ 12 ರಂದು ವಾಹನ ಸಂಚಾರ ಹೆಚ್ಚಾಗಿರುವ ಎಸ್.ಜೆ.ಪಾರ್ಕ್ ಬಳಿ ರಸ್ತೆಯಲ್ಲಿ ರೀಲ್ಸ್ ಮಾಡುತ್ತಾ ಕಿರಿಕ್ ಮಾಡಿದ್ದ. ನಂತರ ಆ ರೀಲ್ಸ್ ಅನ್ನು ತನ್ನ ಇನ್ಸ್ಟಾಗ್ರಾಮ್ ಖಾತೆ simbu_str_123 ನಲ್ಲಿ ಅಪ್ಲೋಡ್ ಮಾಡಿದ್ದ. ಇದನ್ನೂ ಓದಿ:ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ – ಮೋದಿಯನ್ನು ಭೇಟಿಯಾಗಿ ಧನ್ಯವಾದ ಹೇಳಿದ ಮುಸ್ಲಿಮರು
ಸಿಟಿ ಪೊಲೀಸ್ ಸೋಷಿಯಲ್ ಮೀಡಿಯಾ ವಿಂಗ್ ಪುಂಡನ ರೀಲ್ಸ್ ಗಮನಿಸಿತ್ತು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಯುವಕರಿಗೆ ತಪ್ಪು ಸಂದೇಶ ನೀಡಿದ ಅಡಿ ಎಸ್.ಜೆ.ಪಾರ್ಕ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಪುಂಡನನ್ನು ಬಂಧಿಸಿದ್ದರು. ಇದನ್ನೂ ಓದಿ: ಜಡ್ಜ್ ಮನೆಯಲ್ಲಿ ಪತ್ತೆಯಾದ ಕಂತೆ ಕಂತೆ ಹಣದ ಬಗ್ಗೆ ಎಫ್ಐಆರ್ ಆಗಿಲ್ಲ ಯಾಕೆ: ಧನಕರ್ ಪ್ರಶ್ನೆ
ಬೆಂಗಳೂರು ಪೊಲೀಸರು ಈಗ ಪುಂಡನ ರೀಲ್ಸ್ ಮತ್ತು ಬಂಧನ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಮುಂದೆ ಯಾರಾದರೂ ಈ ರೀತಿ ಹುಚ್ಚಾಟ ಮಾಡಿದವರಿಗೆ ಬಿಸಿ ಮುಟ್ಟಿಸಲಾಗುವುದು ಎಚ್ಚರಿಕೆ ನೀಡಿದ್ದಾರೆ.