ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ 5 ತಿಂಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
14 ವರ್ಷದ ಬಾಲಕಿಯನ್ನು ಅದೇ ಗ್ರಾಮದ 45 ವರ್ಷದ ವ್ಯಕ್ತಿಯೊಬ್ಬರು ಆಮಿಷವೊಡ್ಡಿ ಮುಂಬೂಗೆ ಕರೆದೊಯ್ದಿದ್ದಾರೆ. ನಂತರ ಅಲ್ಲಿ ಆತ ಹಾಗೂ ಇನ್ನಿಬ್ಬರೊಂದಿಗೆ 5 ತಿಂಗಳ ಕಾಳ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.
Advertisement
Advertisement
ಆರೋಪಿಗಳ ಹಿಡಿತದಿಂದ ಆಕೆ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಬಂದಿದ್ದಾಳೆ. ಆ ಬಳಿಕ ಆಕೆ ತನಗಾದ ನರಳಾಟವನ್ನು ವಿವರಿಸಿದ್ದಾಳೆ. ಘಟನೆ ಸಂಬಂಧಿಸಿ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲೇ ಅಡುಗೆ ಮಾಡಿ ತಿಂದ ಪ್ರತಿಭಟನಾಕಾರರು
Advertisement
Advertisement
ಘಟನೆ ಸಂಬಂಧಿಸಿ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಹಾಗೂ ಮತ್ತಿಬ್ಬರು ಆರೋಪಿಗಳ ಬಂಧನಕ್ಕಾಗಿ ಶೋಧ ಮುಂದುವರಿದಿದೆ ಎಂದು ಜ್ಞಾನಪುರ ಸರ್ಕಲ್ ಆಫೀಸರ್ ಭುವನೇಶ್ವರ್ ಪಾಂಡೆ ತಿಳಿಸಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿ ಆಕೆಯ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದ ಅಮರನಾಥ ಯಾತ್ರೆ ಪುನಾರಂಭ