ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ (Cab) ಕಾಯುತ್ತಿದ್ದ ಯುವತಿಯೊಬ್ಬಳಿಗೆ ʻನಿನ್ ರೇಟ್ ಎಷ್ಟು?ʼ ಅಂತ ಕೇಳಿ ಕಿರುಕುಳ ನೀಡಿದ ಕಾಮುಕನನ್ನ ಬೆಂಗಳೂರಿನ ರಾಮಮೂರ್ತಿನಗರ ಪೊಲೀಸರು (Ramamurthy Nagar Police) ಬಂಧಿಸಿದ್ದಾರೆ.
ವಿಜಯ್ ರಾಘವ್ ( 42 ) ಬಂಧಿತ ಆರೋಪಿ. ಈತ ಹಣ್ಣಿನ ವ್ಯಾಪಾರಿಯಾಗಿದ್ದು, ಎನ್ಆರ್‌ಐ ಲೇಔಟ್ ನಿವಾಸಿ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕ್ಯಾಬ್ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ
ಏನಿದು ಕೇಸ್?
ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ (Cab) ಕಾಯುತ್ತಿದ್ದ ಯುವತಿಯೊಬ್ಬಳಿಗೆ ʻನಿನ್ ರೇಟ್ ಎಷ್ಟು?ʼ ಅಂತ ಕಿರುಕುಳ ನೀಡಿದ ಶೋಚನೀಯ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಸ್ಕೂಟರ್‌ನಲ್ಲಿ ಬಂದ ವಿಜಯ್ ರಾಘವ್ ಯುವತಿಯನ್ನ ಕಂಡ ತಕ್ಷಣ ಅಸಭ್ಯವಾಗಿ ಮಾತನಾಡಿಸಿ, ಲೈಂಗಿಕವಾಗಿ ನಿಂದಿಸುತ್ತಾ ರೇಟ್ ಎಷ್ಟು? ಎಂದು ಕೇಳಿ ಕಿರುಕುಳ ನೀಡಿದ್ದ.

ಘಟನೆಯಿಂದ ಧೃತಿಗೆಡದ ಧೈರ್ಯವಂತ ಯುವತಿ, ತಕ್ಷಣವೇ ತನ್ನ ಮೊಬೈಲ್‌ನಲ್ಲಿ ಕಾಮುಕನ ಕೃತ್ಯ ಸೆರೆಹಿಡಿದಿದ್ದಳು. ತನ್ನ ಮುಖ ಮತ್ತು ವಾಹನದ ಸಂಖ್ಯೆ ಮೊಬೈಲ್‌ನಲ್ಲಿ ಸಂಪೂರ್ಣವಾಗಿ ರೆಕಾರ್ಡ್ ಆಗುತ್ತಿರುವುದು ತಿಳಿಯುತ್ತಿದ್ದಂತೆ ಕಾಮುಕ ಅಲ್ಲಿಂದ ಕಾಲ್ಕಿತ್ತಿದ್ದ. ಇದನ್ನೂ ಓದಿ: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ
ಬಳಿಕ, ಯುವತಿ ಆ ವಿಡಿಯೋವನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡು, ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದರು. ನಗರದಲ್ಲಿ ಒಂಟಿಯಾಗಿ ನಿಲ್ಲಲು ಭಯವಾಗುವ ಪರಿಸ್ಥಿತಿ ಬಂದಿದೆಯೇ ಎಂದು ಕಳವಳ ವ್ಯಕ್ತಪಡಿಸಿದ್ದರು. ವೀಡಿಯೋ ಸಮೇತ ಬೆಂಗಳೂರು ನಗರ ಪೊಲೀಸರನ್ನು ಟ್ಯಾಗ್ ಮಾಡಿ, ಆರೋಪಿಯ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿದ್ದ ರಾಮಮೂರ್ತಿನಗರ ಪೊಲೀಸರು ತನಿಖೆ ಕೈಗೊಂಡಿದ್ದರು. ಇದೀಗ ಆರೋಪಿಯನ್ನ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಶಿವಾಜಿನಗರದಲ್ಲಿ ಮತ್ತೆ ಫುಟ್‌ಪಾತ್ ತೆರವು ಕಾರ್ಯ – 100ಕ್ಕೂ ಹೆಚ್ಚು ಪೊಲೀಸರ ಸರ್ಪಗಾವಲು
