ಬೀದರ್: ಅಕ್ರಮವಾಗಿ ಮಾದಕ ವಸ್ತು(ಅಫೀಮು) ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬೀದರ್ ಅಬಕಾರಿ ಪೊಲೀಸರು ಇಂದು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮಿಂಚಿನ ಕಾರ್ಯಾಚರಣೆ ನಡೆಸಿದ ಬೀದರ್ ಅಬಕಾರಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 35 ಲಕ್ಷ ರೂ. ಬೆಲೆ ಬಾಳುವ ಅಫೀಮು ಹಾಗೂ ಲಾರಿಯನ್ನು ಅಬಕಾರಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಮಾದಕ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿ ಸುಜೀತ್ ಸಿಂಗ್‍ನನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
Advertisement
Advertisement
ಈ ಆರೋಪಿ ಮಾದಕ ವಸ್ತುಗಳನ್ನು ಲಾರಿಯಲ್ಲಿ ತುಂಬಿಕೊಂಡು ಹಿಮಾಚಲ ಪ್ರದೇಶದಿಂದ ಚೆನ್ನೈಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ಪಬ್ಲಿಕ್ ಟಿವಿಗೆ ಅಬಕಾರಿ ಪೊಲೀಸರು ಮಾಹಿತಿ ನೀಡಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದ ಬಳಿ ದಾಳಿ ಮಾಡಿದ ಅಬಕಾರಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ.
Advertisement
ಬೀದರ್ ಜಿಲ್ಲೆ ಮಹಾರಾಷ್ಟ್ರ ಹಾಗೂ ತೆಲಂಗಾಣ ಎರಡು ರಾಜ್ಯಗಳ ಗಡಿ ಹೊಂದಿಕೊಂಡಿರುವುದರಿಂದ ಮಾದಕ ವಸ್ತುಗಳ ಅಕ್ರಮವಾಗಿ ಸಾಗಾಟ ಮಾಡಲು ಆರೋಪಿಗಳಿಗೆ ಸುಲಭ ಮಾರ್ಗವಾಗಿದೆ. ಹೀಗಾಗಿ ಈ ಭಾಗದಲ್ಲಿ ಅಕ್ರಮ ಮಾದಕ ವಸ್ತುಗಳ ಸಾಗಾಟ ನಡೆಯುತ್ತದೆ ಎನ್ನಲಾಗಿದೆ.