ಹೈದರಾಬಾದ್: 2 ನಾಯಿಮರಿಗಳನ್ನು (Puppies) ಕೊಂದು, ಕೃತ್ಯದ ವೀಡಿಯೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಹೈದರಾಬಾದ್‌ನ (Hyderabad) ವ್ಯಕ್ತಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಮೂಕ ಪ್ರಾಣಿಗಳ ಮೇಲೆ ಕ್ರೂರ ಕೃತ್ಯ ಎಸಗಿದ ವ್ಯಕ್ತಿ ಮೊದಲ ನಾಯಿಮರಿಯನ್ನು ಮರಕ್ಕೆ ನೇತುಹಾಕಿ, ಎರಡನೆಯದನ್ನು ಕಟ್ಟಡದ 4ನೇ ಮಹಡಿಯಿಂದ ಎಸೆದು ಕೊಂದಿದ್ದಾನೆ. ಬಳಿಕ ಅದು ಜೀವಂತವಾಗಿದೆಯೇ ಎಂಬುದನ್ನು ನೋಡಲು ಕಾಲಿನಿಂದ ಒದ್ದಿದ್ದಾನೆ. ಕೃತ್ಯದ ವೀಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ವ್ಯಕ್ತಿಯನ್ನು ಕಟ್ಟೇಡನ್ ಪ್ರದೇಶದ ನಿವಾಸಿ ರೇ ಎಂದು ಪೊಲೀಸರು ಗುರುತಿಸಿದ್ದಾರೆ. ಇದನ್ನೂ ಓದಿ: ಚಿರತೆ ಕಣ್ಣಾಮುಚ್ಚಾಲೆ, 15 ದಿನಗಳಿಂದ ಬೃಂದಾವನ ಕ್ಲೋಸ್ – ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ
Advertisement
Advertisement
Advertisement
ನವೆಂಬರ್ 15ರಂದು ವೀಡಿಯೋವನ್ನು ಆರೋಪಿ ಅಪ್ಲೋಡ್ ಮಾಡಿದ್ದಾನೆ. ಕೃತ್ಯ ಬೆಳಕಿಗೆ ಬಂದಂತೆ ಮೈಲಾರ್‌ದೇವಪಲ್ಲಿ ಪೊಲೀಸರು ವ್ಯಕ್ತಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
Advertisement
ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 429 (ಪ್ರಾಣಿಗಳನ್ನು ಕೊಲ್ಲುವ ಮೂಲಕ ದುಷ್ಕೃತ್ಯಕ್ಕೆ ಶಿಕ್ಷೆ) ಮತ್ತು ಸೆಕ್ಷನ್ 11 (ಎಲ್) ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ (ಪಿಸಿಎಎ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ವೈಯಕ್ತಿಕ ಟೀಕೆ ಮಾಡುತ್ತಿದ್ರೆ ಚಪ್ಪಲಿಯಲ್ಲಿ ಹೊಡಿತೀನಿ – ಬಿಜೆಪಿ ಸಂಸದರಿಗೆ ಕವಿತಾ ವಾರ್ನ್