ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದಡಿ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಆರೋಪಿಯನ್ನು ಸಹಸ್ವಾನ್ ಪೊಲೀಸ್ ಠಾಣಾ ವ್ಯಾಪ್ತಿಯ ನದಯಾಲ್ ಗ್ರಾಮದ ರೆಹಾನ್ ಎಂದು ಗುರುತಿಸಲಾಗಿದೆ. ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 4 ರಾಜ್ಯಗಳಲ್ಲಿ 9 ಎಫ್‌ಐಆರ್ – ಬಿಜೆಪಿ ಮಾಜಿ ವಕ್ತಾರೆ ನೂಪುರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇಕೆ?
Advertisement
Advertisement
ಇದೀಗ ಆರೋಪಿ ವಿರುದ್ಧ ಸಬ್ ಇನ್ಸ್‌ಪೆಕ್ಟರ್ ರಾಜೇಶ್ ಕುಮಾರ್ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಠಾಣೆಯ ಪ್ರಭಾರಿ ಸಂಜೀವ್ ಕುಮಾರ್ ಶುಕ್ಲಾ ಹೇಳಿದ್ದಾರೆ. ಇದನ್ನೂ ಓದಿ: ಸಾಲಕ್ಕೆ ತಿಂಡಿ ನೀಡಲು ನಿರಾಕರಣೆ – ಮಾಲೀಕ ಸೇರಿದಂತೆ 7 ಮಂದಿ ಮೇಲೆ ಆ್ಯಸಿಡ್ ದಾಳಿ