ಲಕ್ನೋ: ತರಗತಿ ನೆಪದಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತೆಯನ್ನು ತನ್ನ ಮನೆಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದೆ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
30 ವರ್ಷದ ಆರೋಪಿಯ ಪತ್ನಿ ಇಜ್ಜತ್ನಗರದಲ್ಲಿ ಕೋಚಿಂಗ್ ಇನ್ಸ್ಟಿಟ್ಯೂಟ್ ನಡೆಸುತ್ತಿದ್ದರು. ಇದನ್ನೇ ಲಾಭವಾಗಿ ಇಟ್ಟುಕೊಂಡ ಆರೋಪಿ ಅಲ್ಲಿ ಕಲಿಯುತ್ತಿದ್ದ 15 ವರ್ಷದ ಬಾಲಕಿಯನ್ನು ಪಾಠ ಹೇಳಿಕೊಡುವುದಾಗಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಈ ಸಂಬಂಧ ಬಾಲಕಿಯ ಪೋಷಕರು ಆತನ ವಿರುದ್ಧ ಇಜ್ಜತ್ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತು ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಜಾಗತಿಕ ಪರಿಸರ ಉಪಕ್ರಮ ‘ಲೈಫ್ ಮೂವ್ಮೆಂಟ್’ಗೆ ಚಾಲನೆ ನೀಡಲಿರುವ ಮೋದಿ
ಈ ಬಗ್ಗೆ ಅಲ್ಲಿನ ಪೊಲೀಸರು ಮಾತನಾಡಿ, ಪ್ರಕಣ ಜೂನ್ 2ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯು ಟ್ಯೂಷನ್ ನೆಪದಲ್ಲಿ ಅಪ್ರಾಪ್ತನನ್ನು ತನ್ನ ಮನೆಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್ – ಸ್ಟೆಷನರಿ, ಕಿರಾಣಿ ಅಂಗಡಿಗೆ ಬೆಂಕಿ