Recent News

ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಅರೆಸ್ಟ್

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತನನ್ನು 23 ವರ್ಷದ ಹನಮಂತ ಮಹಾಗುಂಡಪ್ಪ ಹುಣಸಗೇರಿ ಎಂದು ಗುರುತಿಸಲಾಗಿದೆ. ಈತ ಮೇ 17ರಂದು ಗ್ರಾಮ ದೇವತೆಯ ಜಾತ್ರೆ ಸಂದರ್ಭದಲ್ಲಿ ಮನೆಗೆ ನುಗ್ಗಿ ಒಬ್ಬಳೇ ಇದ್ದ 29 ವರ್ಷದ ಬುದ್ಧಿಮಾಂದ್ಯ ಯುವತಿಯನ್ನು ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಕತ್ತು ಹಿಸುಕಿ ಕೊಲೆಗೆ ಯತ್ನಿಸಿ ಬಳಿಕ ಪರಾರಿಯಾಗಿದ್ದನು.

ಈ ಸಂಬಂಧ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಪತ್ತೆಹಚ್ಚಲು ಯುವತಿಯನ್ನು ತನಿಖೆಗೆ ಒಳಪಡಿಸಲಾಗಿತ್ತು. ದೆಹಲಿ ನಿರ್ಭಯಾ ಪ್ರಕರಣದಲ್ಲಿ ವೈದ್ಯಕೀಯ ಪರಿಶೀಲನೆ ಮಾಡಿದ ವೈದ್ಯರಿಂದಲೇ ವೈದ್ಯಕೀಯ ಪರೀಕ್ಷೆ ಮಾಡಲಾಯಿತು. ಈ ವೇಳೆ ಯುವತಿಯ ಎದೆಯ ಮೇಲೆ ಕಚ್ಚಿದ ಹಲ್ಲಿನ ಕಲೆಗಳ ಆಧಾರದ ಮೇಲೆ ಆತನನ್ನು ಪತ್ತೆಹಚ್ಚಲಾಗಿದೆ. ಅಲ್ಲದೆ ಆತ ಅತ್ಯಾಚಾರವೆಸಗಿದ ಮನೆಯಿಂದ ಮೊಬೈಲ್ ಫೋನ್ ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ.

ಖಾಕಿ ಬಲೆಗೆ ಬಿದ್ದ ಆರೋಪಿ ಈ ಹಿಂದೆ ಯುವತಿಯರಿಗೆ ಚುಡಾಯಿಸುತ್ತಿದ್ದನು. ಅಲ್ಲದೆ ಯುವತಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಜಾತಿ ನಿಂದನೆ ಕೇಸ್‍ನಲ್ಲಿ ಜೈಲಿನಲ್ಲಿದ್ದ ಎನ್ನಲಾಗಿದೆ.

ಜೈಲಿನಿಂದ ಹೊರ ಬಂದ ತಿಂಗಳ ಒಳಗಾಗಿ ಅಮಾಯಕ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದನು. ಇದರಿಂದ ತಿಂಗಳುಗಳ ಕಾಲ ಆಕೆ ಪ್ರಜ್ಞಾಹೀನಳಾಗಿದ್ದಳು. ಖಾಸಗಿ ಆಸ್ಪತ್ರೆಯಲ್ಲಿ ಕಡಿಮೆ ವೆಚ್ಚದ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸಾ ವೆಚ್ಚವನ್ನು ಜಿಲ್ಲಾಧಿಕಾರಿ ಸ್ಕೀಮ್‍ವೊಂದರಿಂದ ಭರಿಸಲಾಗುವುದು ಎಂದು ಹೇಳಲಾಗಿದೆ. ಸದ್ಯ ಯುವತಿಯು ಸುದೀರ್ಘ ವೈದ್ಯಕೀಯ ಚಿಕಿತ್ಸೆ ಬಳಿಕ ಪ್ರಜ್ಞಾವಸ್ಥೆಗೆ ಬಂದಿದ್ದಾಳೆ. ಪೋರೆನ್ಸಿಕ್ ಲ್ಯಾಬ್ ನಿಂದ ವರದಿ ಬಂದ ತಕ್ಷಣ ಸಮರ್ಪಕ ದಾಖಲೆಗಳ ಸಮೇತ ಚಾರ್ಜ್ ಸೀಟ್ ಸಲ್ಲಿಕೆ ಮಾಡಲಿದ್ದು, ಆರೋಪಿಗೆ ಶಿಕ್ಷೆ ಖಂಡಿತ ಎಂದು ಎಸ್.ಪಿ ಅಭಿನವ್ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *