ಮಂಗಳೂರು: ದೈವಸ್ಥಾನದಲ್ಲಿ ವಿಕೃತಿ ಮೆರೆದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸಾಹುಲ್ ಹಮೀದ್(27) ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹೊರವಲಯದ ಕೈಕಂಬದ ಕಂದಾವರ ಎಂಬಲ್ಲಿನ ಕಂದಾವರ ಪದವು ಶ್ರೀ ಕೋಡ್ದಬ್ಬು ದೇವಸ್ಥಾನಕ್ಕೆ ಆರೋಪಿ ಅಕ್ರಮವಾಗಿ ಪ್ರವೇಶಿಸಿ ಕೃತ್ಯ ಎಸಗಿದ್ದಾನೆ.
Advertisement
Advertisement
ರಾತ್ರಿ ಹೊತ್ತು ಅಕ್ರಮವಾಗಿ ಪ್ರವೇಶಿಸಿದ್ದ ಆರೋಪಿ ಆಯದಕಲ್ಲಿಗೆ ಹಾಗೂ ಅಂಗಣದ ಸುತ್ತಲೂ ರಕ್ತ ಸುರಿಸಿ ಓಡಾಡಿದ್ದಾನೆ. ಇತ್ತ ಘಟನೆ ಬೆಳಕಿಗೆ ಬರುತ್ತಿದ್ದಂತೆ ಭಕ್ತರು ಬಬ್ಬುಸ್ವಾಮಿಯ ದರ್ಶನ ನಡೆಸಿದ್ದರು. ದುಷ್ಕರ್ಮಿ ಪತ್ತೆಯಾಗಬೇಕೆಂದು ಪ್ರಾರ್ಥಿಸಿದರು. ಅಲ್ಲದೆ ಪೊಲೀಸ್ ಠಾಣೆಗೂ ದೂರು ನೀಡಿದರು. ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ ಬಂಧನ ಯಾವಾಗ?: ಕಾಂಗ್ರೆಸ್ ಪ್ರಶ್ನೆ
Advertisement
Advertisement
ದೂರು ದಾಖಲಾದ ಕೆಲವೇ ಗಂಟೆಗಳಲ್ಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ಅಸ್ವಸ್ಥತೆಯಿಂದ ಸಾಹುಲ್ ಹಮೀದ್ ಬಳಲುತ್ತಿರುವುದಾಗಿ ಮಾಹಿತಿ ದೊರಕಿದೆ. ಕೈ ಗಾಯಮಾಡಿಕೊಂಡು ದೈವಸ್ಥಾನಕ್ಕೆ ಪ್ರವೇಶಿಸಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗೋಮಾಂಸ ಸಾಗಿಸುತ್ತಿದ್ದಾನೆಂದು ಶಂಕಿಸಿ ಹಿಗ್ಗಾಮುಗ್ಗಾ ಥಳಿಸಿದ್ರು
ಪ್ರಕರಣ ಸಂಬಂಧ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿ, ಆರೋಪಿ ಸಾಹುಲ್ ನನ್ನು ಈಗಾಗಲೇ ಬಂಧನ ಮಾಡಿದ್ದೇವೆ. ಘಟನೆಯ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಯುವಕನ ಕೃತ್ಯದ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಮೆಡಿಕಲ್ ಟೆಸ್ಟ್ ವೇಳೆ ಆರೋಪಿ ಮಾನಸಿಕ ಅಸ್ವಸ್ಥ ಅಂತಾ ಕಂಡುಬಂದಿಲ್ಲ. ಆರೋಪಿ ಮಾಡಿರುವ ಕೃತ್ಯದ ಉದ್ದೇಶ ಗೊತ್ತಾಗಿಲ್ಲ. ಇದರ ಹಿಂದೆ ಯಾರಿದ್ದಾರೆ ಎಂಬುವುದರ ಬಗ್ಗೆ ತನಿಖೆ ಮಾಡುತ್ತೇವೆ ಎಂದರು.