CrimeDistrictsKarnatakaLatestMain PostRamanagara

ಚಾಕ್ಲೇಟ್ ಆಸೆ ತೋರಿಸಿ 2 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಗೈದ ದೊಡ್ಡಪ್ಪ!

ರಾಮನಗರ: ಚಾಕ್ಲೇಟ್ ಕೊಡಿಸ್ತೀನೆಂದು ಕರೆದುಕೊಂಡು ಹೋಗಿ 2 ವರ್ಷದ ಪುಟ್ಟ ಕಂದಮ್ಮನ ಮೇಲೆ ಆಕೆಯ ದೊಡ್ಡಪ್ಪನೇ ಅತ್ಯಾಚಾರ ಎಸಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಆರೋಪಿಯನ್ನು ಸಾದಿರ್ ಪಾಷಾ (28) ಎಂದು ಗುರುತಿಸಲಾಗಿದೆ. ಆರೋಪಿ ಪಾಷಾ ಗುರುವಾರ ಮಧ್ಯಾಹ್ನ ಚಾಕ್ಲೇಟ್ ಕೊಡಿಸುವುದಾಗಿ ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಇತ್ತ ತಡರಾತ್ರಿ ಆದರೂ ಮಗುವನ್ನು ಮನೆಗೆ ಕರೆದುಕೊಂಡು ಬಾರದ ಹಿನ್ನೆಲೆಯಲ್ಲಿ ಮಗುವಿನ ಪೋಷಕರು ಆತಂಕಗೊಂಡಿದ್ದಾರೆ. ಅಲ್ಲದೆ ಮಗುವನ್ನು ಈ ಕೂಡಲೇ ಮನೆಗೆ ಕರೆದುಕೊಂಡು ಬರುವಂತೆ ಹೇಳಿದ್ದಾರೆ.

ಅಂತೆಯೇ ಪಾಷಾ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಮಗುವಿನ ಬಟ್ಟೆಯಲ್ಲಿ ರಕ್ತದ ಕಲೆ, ಮೈಮೇಲೆ ಗಾಯಗಳನ್ನು ಕಂಡು ಪೋಷಕರು ಗಾಬರಿಗೊಂಡಿದ್ದಾರೆ. ಕೂಡಲೇ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ತನ್ನನ್ನು ತಾನೇ ಮದುವೆಯಾಗಿ, ಗೋವಾಗೆ ಹನಿಮೂನಿಗೆ ಹೊರಟ ಹುಡುಗಿಗೆ ಈ ಸಿನಿಮಾ ಸ್ಫೂರ್ತಿ?

ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಮಗುವಿಗೆ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚನ್ನಪಟ್ಟಣ ಪೂರ್ವ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಬಂಧ ಬಾಲಕಿ ತಾಯಿ ಮಾತನಾಡಿ, ನನ್ನ ಮಗಳನ್ನ ಚಾಕ್ಲೇಟ್ ಕೊಡಿಸುತ್ತೇನೆಂದು ಕರೆದುಕೊಂಡು ಹೋದರು. ನಮ್ಮ ಬಾವನೆ ಈ ಕೆಲಸ ಮಾಡಿದ್ದಾರೆ. ನಮಗೆ ಬಹಳ ನೋವಾಗ್ತಿದೆ ಎಂದು ಕಣ್ಣೀರು ಹಾಕಿದ್ದಾರೆ.

Leave a Reply

Your email address will not be published.

Back to top button