ಶಿವಮೊಗ್ಗ: ಇಲ್ಲಿನ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದ್ದು, ಈ ವೇಳೆ ಪೊಲೀಸರ ಮುಂದೆಯೇ ಅವಾಜ್ ಹಾಕಿದ್ದ ವ್ಯಕ್ತಿಯನ್ನು ಇದೀಗ ಬಂಧಿಸಲಾಗಿದೆ.
Advertisement
ವ್ಯಕ್ತಿಯನ್ನು ಕಲೀಂ ಎಂದು ಗುರುತಿಸಲಾಗಿದೆ. ಈತ ಶಿವಮೊಗ್ಗ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ, ಗಲಾಟೆ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಮುಂದೆಯೇ ಅವಾಜ್ ಹಾಕಿದ್ದನು ಎನ್ನಲಾಗಿದೆ. ಇದನ್ನೂ ಓದಿ: ಶಿವಮೊಗ್ಗ ಗಲಭೆಗೆ ಟ್ವಿಸ್ಟ್ – ರಾಗಿಗುಡ್ಡದ ಗಲಾಟೆ ಪೂರ್ವನಿಯೋಜಿತ?
Advertisement
Advertisement
ಪೊಲೀಸ್ ಇನ್ಸ್ ಪೆಕ್ಟರ್ ಹರೀಶ್ ಪಟೇಲ್ ಮುಂದೆ, ಒಂದಾ ನಾವು ಸಾಯಬೇಕು, ಇಲ್ಲದಿದ್ದರೆ ಅವರು ಸಾಯಬೇಕು. ನಾವು ಸಾಬ್ರು ಹೇಗೆ ಅಂತಾ ಗೊತ್ತಲ್ಲ ಎಂದು ಅವಾಜ್ ಹಾಕಿದ್ದಾನೆ. ಸದ್ಯ ಈ ಅವಾಜ್ ಹಾಕಿರುವ ರಾಗಿಗುಡ್ಡದ ಕಲೀಂನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಾವು ಎಂತವರು ಗೊತ್ತಲ್ಲಾ.. ಇಷ್ಟರೊಳಗೆ ರಾಜ್ಯಕ್ಕೆ ಬೆಂಕಿ ಹಾಕ್ಬೇಕಿತ್ತು: ಪೊಲೀಸರಿಗೆ ಕಿಡಿಗೇಡಿಯಿಂದ ಆವಾಜ್
Advertisement
ನಡೆದಿದ್ದೇನು..?: ಶಿವಮೊಗ್ಗದ (Shivamogga) ರಾಗಿಗುಡ್ಡ (Ragigudda) ಶಾಂತಿನಗರದಲ್ಲಿ ಈದ್ ಮಿಲಾದ್ ಮೆರವಣಿಗೆ (Eid Milad Procession) ವೇಳೆ ಕಲ್ಲು ತೂರಾಟ (Stone Pelting) ನಡೆದಿದೆ. 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು, 1 ಬೈಕ್ ಜಖಂಗೊಂಡಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. 35 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Web Stories