ಬೆಂಗಳೂರು: ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ಯುವತಿಯರ ಅಂಗಾಂಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ಕಾಮುಕನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್‍ಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಯನಗರದಲ್ಲಿ (Jayanagar) ನಡೆದಿದೆ. ಅಲ್ಲದೇ ಆರೋಪಿಗೆ ಬಿಎಂಆರ್‌ಸಿಎಲ್ (BMRCL) 5,000 ರೂ. ದಂಡ ವಿಧಿಸಿದೆ.
ವಶಕ್ಕೆ ಪಡೆಯಲಾದ ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ. ಆರೋಪಿ, ಮೆಟ್ರೋದಲ್ಲಿ ಪ್ರಯಾಣ ಮಾಡುವ ಮಹಿಳೆಯರ ಖಾಸಗಿ ಅಂಗಾಂಗಗಳ ಫೋಟೋ ಹಾಗೂ ವಿಡಿಯೋ ತೆಗೆಯುತ್ತಿದ್ದ. ಆರೋಪಿಯ ಮೊಬೈಲ್‍ನಲ್ಲಿ ಸುಮಾರು 50 ಯುವತಿಯರ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿವೆ.
Advertisement
ಡಿ.25 ರಂದು ಬೆಳಿಗ್ಗೆ 9 ಗಂಟೆಗೆ ಯುವತಿಯೊಬ್ಬಳು ಮೆಜೆಸ್ಟಿಕ್‍ನಿಂದ ಜೆಪಿ ನಗರ ಮೆಟ್ರೋ ಸ್ಟೇಷನ್‍ಗೆ ಹೋಗ್ತಿದ್ದಳು. ಈ ವೇಳೆ ಯುವಕ, ಯುವತಿಯ ಖಾಸಗಿ ಅಂಗಾಂಗಗಳ ವಿಡಿಯೋ ತೆಗೆಯುತ್ತಿದ್ದನ್ನು ಗಮನಿಸಿ ಆತನಿಗೆ ಹೊಡೆದಿದ್ದಾಳೆ. ಈ ವೇಳೆ ನೈಟ್ ಡ್ಯೂಟಿ ಮುಗಿಸಿ ಮನೆಗೆ ಹೋಗ್ತಿದ್ದ ಇಬ್ಬರು ಸೆಕ್ಯೂರಿಟಿಗಳು ಯುವತಿಯ ಸಹಾಯಕ್ಕೆ ಧಾವಿಸಿದ್ದಾರೆ. ಈ ವೇಳೆ ಮಹೇಶ್‍ನ ಕೃತ್ಯ ಬೆಳಕಿಗೆ ಬಂದಿದೆ.
Advertisement
Advertisement
ಜಯನಗರ ಮೆಟ್ರೋ ಸ್ಟೇಷನ್‍ನಲ್ಲಿ ಯುವಕನನ್ನು ರೈಲಿನಿಂದ ಕೆಳಗಿಳಿಸಿ, ಮೊಬೈಲ್ ಪರಿಶೀಲನೆ ನಡೆಸಿದಾಗ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿವೆ. ಆತನನ್ನು ಜಯನಗರ ಪೊಲೀಸ ವಶಕ್ಕೆ ನೀಡಲಾಗಿದೆ.
Advertisement
ಡ್ಯೂಟಿಯಲ್ಲಿ ಇಲ್ಲದಿದ್ದರೂ ಯುವತಿಯ ಸಹಾಯಕ್ಕೆ ಧಾವಿಸಿದ ಮೆಟ್ರೋ ಸೆಕ್ಯುರಿಟಿ ಗಾರ್ಡ್ ಸುಜೀತ್ ಹಾಗೂ ಎಸ್.ಜಿ ರಾಮ್ ಬಹದ್ದೂರ್ ಅವರನ್ನು ಬಿಎಂಆರ್‍ಸಿಎಲ್ ಅಭಿನಂದಿಸಿದೆ.