Connect with us

Chitradurga

200 ಮಹಿಳೆಯರಿಗೆ ಅಶ್ಲೀಲ ಫೋಟೋ ರವಾನಿಸಿದ್ದ ಚಪಲಚನ್ನಿಗರಾಯ ಅರೆಸ್ಟ್

Published

on

ಚಿತ್ರದುರ್ಗ: ಮಹಿಳೆಯರ ಮೊಬೈಲ್ ನಂಬರ್ ಸಂಗ್ರಹಿಸಿ ಅವರ ವಾಟ್ಸಪ್‍ಗೆ ಅಶ್ಲೀಲ ಫೋಟೋ ಹಾಗೂ ಸಂದೇಶ ರವಾನಿಸುತ್ತಿದ್ದ 55 ವರ್ಷದ ವ್ಯಕ್ತಿಯೋರ್ವನನ್ನು ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತ್ಯಾಗರಾಜ ನಗರದ ಓ.ರಾಮಕೃಷ್ಣ (54) ಎಂಬ ವ್ಯಕ್ತಿಯು ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೊ ಸಂದೇಶ ಕಳಿಸಿದ್ದಾನೆಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಳ್ಳಕೆರೆ ಪೊಲೀಸರು ರಾಮಕೃಷ್ಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಂಧನಕ್ಕೊಳಪಟ್ಟಿರುವ ರಾಮಕೃಷ್ಣ, ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆದರೆ ಮರ್ಯಾದೆಗೆ ಅಂಜಿ ಯಾರೂ ದೂರು ನೀಡಿರಲಿಲ್ಲ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಕಾರ್ಯಪ್ರವೃತ್ತರಾದ ಚಳ್ಳಕೆರೆ ಪೊಲೀಸರು ಆತನ ಮೊಬೈಲ್ ಟವರ್ ಲೊಕೇಶನ್ ಪತ್ತೆಹಚ್ಚಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮಹಿಳೆಯರಿಗೆ ಆಗುತ್ತಿದ್ದ ಕಿರುಕುಳ ತಪ್ಪಿಸಿದಂತಾಗಿದೆ. ಅಲ್ಲದೆ ಈತನಿಂದ ಸಂಕಷ್ಟಕ್ಕೀಡಾಗಿದ್ದ ಮಹಿಳೆಯರು ನಿಟ್ಟಸಿರು ಬಿಡುವಂತಾಗಿದೆ.

Click to comment

Leave a Reply

Your email address will not be published. Required fields are marked *