ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ (Narendra Modi), ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ನಿಂದಿಸಿ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಸುರಪುರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಮಹಮ್ಮದ್ ರಸೂಲ್ ಕಡ್ದಾರೆ ಬಂಧಿತ ಆರೋಪಿ. ಯಾದಗಿರಿ ಜಿಲ್ಲೆಯ ಸುರಪುರದ ರಂಗಂಪೇಟೆಯಲ್ಲಿ ವಾಸವಾಗಿದ್ದ ಈತ, ಹೈದರಾಬಾದ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಇದೀಗ ಈತ ಕೈಯಲ್ಲಿ ತಲವಾರ್ ಹಿಡಿದುಕೊಂಡು ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಹೈದರಾಬಾದ್ ನಲ್ಲಿದ್ದುಕೊಂಡೇ ವೀಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ.
- Advertisement
ಪ್ರಕರಣ ದಾಖಲಾದ ಮೇಲೆ ಆರೋಪಿ ಮೊಹಮ್ಮದ್ ರಸೂಲ್ ನನ್ನ ಪೊಲೀಸರು ಬಂಧಿಸಿದ್ದಾರೆ. ಬಳಿಕ ಪೊಲೀಸರ ವಿಚಾರಣೆ ವೇಳೆ ಕುಡಿದ ನಶೆಯಲ್ಲಿ ವೀಡಿಯೋ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮೋದಿ ನರ ಕಟ್- ತಲ್ವಾರ್ ಹಿಡಿದು ಅವಾಜ್ ಹಾಕಿದವನಿಗಾಗಿ ಶೋಧ
- Advertisement
ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ರಾಮಸೇನಾ ಜಿಲ್ಲಾಧ್ಯಕ್ಷ ಶರಣು ನಾಯಕ ಸೋಮವಾರ ಸುರಪುರ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣ ದಾಖಲಿಸಿಕೊಂಡಿದ್ದ ಸುರಪುರ ಪೊಲೀಸರು, ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಕಂಬಿ ಹಿಂದೆ ತಳ್ಳಿದ್ದಾರೆ.