CrimeDistrictsKarnatakaLatestVijayapura

ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಿಯರ್ ಬಾಟಲಿಯಿಂದ ಹತ್ಯೆಗೆ ಯತ್ನ

ವಿಜಯಪುರ: ಅಪರಿಚಿತ ವ್ಯಕ್ತಿಯೋರ್ವ ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಿಯರ್ ಬಾಟಲ್ ಹೊಡೆದು, ಇರಿದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ನಗರದ ನಾಗರಬಾವಡಿ ನಿವಾಸಿಯಾದ 8 ವರ್ಷದ ಬಾಲಕ ಇರಿತಕ್ಕೊಳಗಾದನು. ಅಪರಿಚಿತ ವ್ಯಕ್ತಿ ಬಾಲಕನನ್ನು ನಗರದ ಹೊರ ಭಾಗದ ಶಿವಗಿರಿಯ ಬಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ.

ನಿರ್ಜನ ಪ್ರದೇಶದಲ್ಲಿ ಬಾಲಕನಿಗೆ ಬಾಟಲ್ ನಿಂದ ಹೊಡೆದು ಹೊಟ್ಟೆ ಭಾಗಕ್ಕೆ ಇರಿದಿದ್ದಾನೆ. ಆಗ ಇದನ್ನು ಕಂಡ ತೋಟದಲ್ಲಿದ್ದ ವ್ಯಕ್ತಿ ಬಾಲಕನನ್ನ ರಕ್ಷಿಸಿದ್ದಾನೆ. ಗಾಯಗೊಂಡ ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಬಾಲಕನಿಗೆ ಬಾಟಲ್ ಇರಿದ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ.

ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನನ್ನು ಕುಡಿದ ಮತ್ತಿನಲ್ಲಿ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾನೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ಆದರೆ ಈ ಹಲ್ಲೆಗೆ ನಿಖರವಾದ ಕಾರಣ ತಿಳಿದು ಬಂದಿದೆ. ಸದ್ಯಕ್ಕೆ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *

Back to top button