LatestMain PostNational

ನೂಪುರ್ ಶರ್ಮಾಗೆ ಬೆಂಬಲ, ವ್ಯಕ್ತಿ ಮೇಲೆ ಹಲ್ಲೆ- ಇಬ್ಬರ ಬಂಧನ

Advertisements

ಭೂಪಾಲ್: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿದ್ದ ಘಟನೆಗೆ ಸಂಬಂಧಿಸಿ ಮಧ್ಯಪ್ರದೇಶದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಬುಧವಾರ ಬಿಜೆಪಿಯ ಮಾಜಿ ವಕ್ತಾರ ನೂಪುರ್ ಶರ್ಮಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ ಆರೋಪದ ಮೇಲೆ ಆಯುಷ್ ಜಾದಮ್ (25) ಎಂಬವರ ಮೇಲೆ ಜನರ ಗುಂಪೊಂದು ದಾಳಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಗಂಭೀರ ಗಾಯಗೊಂಡಿದ್ದ ಆಯುಷ್ ಸ್ಥಳೀಯ ಪೊಲೀಸ್ ಠಾಣೆಯಲ್ಲಿ 13 ಜನರ ವಿರುದ್ಧ ದೂರು ದಾಖಲಿಸಿದ್ದರು. ಘಟನೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದವರನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಪ್ರಕರಣದಲ್ಲಿ ನೂಪುರ್ ಶರ್ಮಾ ಅವರನ್ನು ಆಯುಷ್ ಬೆಂಬಲಿಸಿದ್ದರು. ಈ ಹಿನ್ನೆಲೆಯಲ್ಲಿ ಬೈಕ್‍ನಲ್ಲಿ ಬರುತ್ತಿದ್ದ ಆಯುಷ್‍ನನ್ನು 13 ದುಷ್ಕರ್ಮಿಗಳ ತಂಡ ಸ್ಥಳೀಯ ಟೋಲ್ ಬೂತ್ ಬಳಿ ದಾಳಿ ನಡೆಸಿತ್ತು. ದಾಳಿಯ ವೇಳೆ ಆಯುಷ್ ಅವರ ತಲೆಗೆ ಗಾಯವಾಗಿತ್ತು. ಇದನ್ನೂ ಓದಿ: ಸೇತುವೆ ಮೇಲೆ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ

ಮೇ ತಿಂಗಳಲ್ಲಿ ನೂಪುರ್ ಶರ್ಮಾ ಅವರು ಟಿವಿ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮಹಮ್ಮದ್ ಅವರ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌- ಇಂದು ಇಡಿ ಮುಂದೆ ಹಾಜರಾಗಲಿದ್ದಾರೆ ಸೋನಿಯಾ

Live Tv

Leave a Reply

Your email address will not be published.

Back to top button