ರಾಯಚೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ನ್ಯಾಯಕ್ಕಾಗಿ ಆಗ್ರಹಿಸಿ ಮೃತನ ಪತ್ನಿ ಗೃಹಸಚಿವರಿಗೆ ಮಾಂಗಲ್ಯಸರ ಸಮೇತ ಮನವಿ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.
Advertisement
ಮೃತನನ್ನು ಶರಣಬಸವ (35) ಎಂದು ಗುರುತಿಸಲಾಗಿದೆ. ಈ ಘಟನೆ ರಾಯಚೂರಿನ (Raichuru) ಮಾನ್ವಿ (Manvi) ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಗಣರಾಜ್ಯೋತ್ಸವ 2025 – ಈ ಬಾರಿಯ ವಿಶೇಷತೆಗಳೇನು? ಟಿಕೆಟ್ ಬುಕ್ಕಿಂಗ್ ಹೇಗೆ?
Advertisement
Advertisement
ಮೇಸ್ತ್ರಿ ಕೆಲಸ ಜೊತೆಗೆ ಟಂಟಂ ಚಾಲಕರಾಗಿದ್ದ ಶರಣಬಸವ, ವಿವಿಧ ಫೈನಾನ್ಸ್ಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಆದರೆ ಅವುಗಳ ಟಾರ್ಚರ್ ತಾಳದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಗೆ ಆಧಾರವಾಗಿದ್ದವರನ್ನು ಕಳೆದುಕೊಂಡು ಪತ್ನಿ, ಮೂವರು ಮಕ್ಕಳು, ತಂದೆ, ತಾಯಿ ಕಂಗಾಲಾಗಿದ್ದಾರೆ. ಈ ಕುರಿತು ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಬೇಸತ್ತು ಶರಣಬಸವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಸಿ, ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement
ಮನೆಗೆ ಆಸರೆಯಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬ ಹೋರಾಟಕ್ಕೆ ಮುಂದಾಗಿದೆ. ಪತಿ ಸಾವಿನಿಂದ ಕಣ್ಣೀರಲ್ಲಿ ಕೈತೊಳೆಯುತ್ತಿರುವ ಮೃತನ ಪತ್ನಿ ಪಾರ್ವತಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಅವರಿಗೆ ಮಾಂಗಲ್ಯ ಸರ ಹಾಗೂ ಮನವಿ ಪತ್ರವನ್ನು ಸ್ಪೀಡ್ ಪೋಸ್ಟ್ ಮಾಡಿದ್ದಾರೆ. ಮನೆಗೆ ಆಧಾರವಾಗಿದ್ದ ಪತಿಯನ್ನು ಕಳೆದುಕೊಂಡಿರುವುದರಿಂದ ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಸಾಲ ವಸೂಲಿಗಾಗಿ ಕಿರುಕುಳ ಕೊಡುವ ಮೈಕ್ರೋ ಫೈನಾನ್ಸ್ಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಸಾಲ ತೀರಿಸಲು ಸಮಯಾವಕಾಶವನ್ನೂ ಕೊಡದೆ ಮನೆ ಬಾಗಿಲು ಬಡಿಯುತ್ತಿರುವುದಕ್ಕೆ ಬಡ ಜನರು ಕಂಗಾಲಾಗಿದ್ದಾರೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಅಧರ್ಮದ ಜಗತ್ತನ್ನು ತೊರೆಯುತ್ತಿದ್ದೇನೆ, ನನ್ನನ್ನು ಹುಡುಕಬೇಡಿ – ಪತ್ರ ಬರೆದು ಬಿಕಾಂ ವಿದ್ಯಾರ್ಥಿ ನಾಪತ್ತೆ