ಕಾರವಾರ: ಕೌಟುಂಬಿಕ ಕಲಹಕ್ಕೆ ಮನನೊಂದು ಮಗುವಿನೊಂದಿಗೆ ಅಪ್ಪ ಕಾಳಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಾರವಾರದ ಸದಾಶಿವಗಡದ ತಾರೀವಾಡದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ಮೂಲದ 40 ವರ್ಷದ ಶಂಕರ್ ಬಂಜಾರ್ ತನ್ನ ಒಂದು ವರ್ಷದ ಮಗು ತನುಷ್‍ನೊಂದಿಗೆ ಕಾಳಿ ನದಿಗೆ ಹಾರಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ನೀರಿನಲ್ಲಿ ಮುಳುಗುತ್ತಿದ್ದ ಅಪ್ಪ ಮತ್ತು ಮಗುವನ್ನು ರಕ್ಷಿಸಿದ್ದಾರೆ.
Advertisement
Advertisement
ನಂತರ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸದ್ಯಕ್ಕೆ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರವಾರದಲ್ಲಿ ಕಟ್ಟಡ ಕಾಮಗಾರಿ ಕೆಲಸ ಮಾಡಿಕೊಂಡಿರುವ ಶಂಕರ್ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗುವನ್ನ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಹೇಳಿದ್ದಾನೆ.
Advertisement
ಈ ಘಟನೆ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Advertisement