ಕಲಬುರಗಿ: ಪತ್ನಿ (Wife) ಮೇಲಿನ ಅನುಮಾನದಿಂದ ವ್ಯಕ್ತಿಯೊನ್ನ ಮನೆಯೊಳಗೆ ಜಿಲೆಟಿನ್ ಕಡ್ಡಿ ಬ್ಲಾಸ್ಟ್ (Gelatin Stick Blast) ಮಾಡಿದ ಘಟನೆ ಆಳಂದ (Alanda) ತಾಲೂಕಿನ ಮಟಕಿ ತಾಂಡದಲ್ಲಿ ನಡೆದಿದೆ. ಜಿಲೆಟಿನ್ ಕಡ್ಡಿ ಸ್ಫೋಟದಿಂದ ಬ್ಲಾಸ್ಟ್ ಮಾಡಿದ ವ್ಯಕ್ತಿ ಹಾಗೂ ಆತನ ಮಗಳು ಸಾವನ್ನಪ್ಪಿದ್ದಾರೆ. ಉಳಿದಂತೆ ಆತನ ಪತ್ನಿ ಹಾಗೂ ನಾಲ್ವರು ಗಂಭಿರವಾಗಿ ಗಾಯಗೊಂಡಿದ್ದಾರೆ.
ಶಿವಲಾಲ್ ಬಳಿರಾಮ್ ರಾಠೋಡ್ (50) ಹಾಗೂ ಮೀರಾ (15) ಸಾವನ್ನಪ್ಪಿದವರು. ಶಿವಲಾಲ್ ತನ್ನ ಹೆಂಡತಿ ಮೇಲೆ ಅನುಮಾನ ಅನುಮಾನ ಪಡುತ್ತಿದ್ದ. ಇದರಿಂದ ತಾನು ಕೆಲಸ ಮಾಡುತ್ತಿದ್ದ ಕಲ್ಲು ಕ್ವಾರಿಯಿಂದ ಜಿಲೇಟಿನ್ ಕಡ್ಡಿ ಮನೆಗೆ ತಂದು, ಇಂದು (ಆ.11) ಬೆಳಗ್ಗೆ ಎಲ್ಲರೂ ಇರುವಾಗಲೇ ಬ್ಲಾಸ್ಟ್ ಮಾಡಿದ್ದಾನೆ. ಇದನ್ನೂ ಓದಿ: ಓವರ್‌ಟೇಕ್ ವಿಚಾರಕ್ಕೆ ಜಗಳ; ಕೆನ್ನೆಗೆ ಬಾರಿಸಿದ್ದಕ್ಕೆ ಯುವಕ ಸಾವು
ಶಿವಲಾಲ್ ಮಾಡಿದ ದುಷ್ಕೃತ್ಯದಿಂದ ಆತನ ಪತ್ನಿ ಸವಿತಾ ಹಾಗೂ ಮನೆಯಲ್ಲಿದ್ದ ಪ್ರಕಾಶ್, ಸುರೇಖಾ ಹಾಗೂ ವಿವೇಕ್ ಎಂಬವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮನೆಯಲ್ಲಿ ಬಚ್ಚಿಟ್ಟಿದ್ದ ಜಿಲೆಟಿನ್
ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಶಿವಲಾಲ್, ಅಲ್ಲಿಂದ ಜಿಲೆಟಿನ್ ಕಡ್ಡಿಗಳನ್ನು ತಂದು ಮನೆಯಲ್ಲಿ ಅಕ್ರಮವಾಗಿ ಬಚ್ಚಿಟ್ಟಿದ್ದ ಎನ್ನಲಾಗಿದೆ. ಪತ್ನಿಯ ನಡತೆ ಬಗ್ಗೆ ಅನುಮಾನ ಹೊಂದಿದ್ದ ಆತ, ಈ ವಿಚಾರವಾಗಿ ಪದೇಪದೇ ಜಗಳವಾಡುತ್ತಿದ್ದ.
ಮಂಗಳವಾರ ಮುಂಜಾನೆ ಮನೆಯಲ್ಲಿದ್ದ ಕುಟುಂಬ ಸದಸ್ಯರೊಂದಿಗೆ ಶಿವಲಾಲ್ ಜಗಳವಾಡಿದ ಬಳಿಕ, ಜಿಲೆಟಿನ್ ಕಡ್ಡಿಗಳಿಗೆ ಬೆಂಕಿ ಹಚ್ಚಿ ಸ್ಫೋಟಿಸಿಕೊಂಡಿದ್ದಾನೆ ಎನ್ನಲಾಗಿದೆ. ಕ್ಷಣಾರ್ಧದಲ್ಲಿ ಸಂಭವಿಸಿದ ಸ್ಫೋಟದ ತೀವ್ರತೆಗೆ ಮನೆಯ ಒಂದು ಭಾಗ ಸಂಪೂರ್ಣವಾಗಿ ಹಾನಿಗೊಳಗಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುಗಳು
ಸ್ಫೋಟದ ಭೀಕರ ಶಬ್ದ ಕೇಳಿ ಸ್ಥಳೀಯರು ಧಾವಿಸಿ ಬಂದು, ಗಾಯಗೊಂಡವರನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ. ಘಟನೆಯಲ್ಲಿ ಶಿವಲಾಲ್ ಹಾಗೂ ಮೀರಾ ಸ್ಥಳದಲ್ಲೇ ಮೃತಪಟ್ಟಿದ್ದರು. ಉಳಿದವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಸ್ಫೋಟದ ಶಬ್ದ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆಳಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲೆಟಿನ್ ಕಡ್ಡಿಗಳು ಶಿವಲಾಲ್‌ಗೆ ಹೇಗೆ ಲಭ್ಯವಾದವು ಹಾಗೂ ಅವುಗಳನ್ನು ಕ್ವಾರಿಯಿಂದ ಮನೆಯಲ್ಲಿ ಬಚ್ಚಿಟ್ಟಿದ್ದರೇ ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ – ಓರ್ವ ಸಾವು, ನರಳಾಡಿದ ಕಾರ್ಮಿಕರು

