Latest

ಸಾರ್ವಜನಿಕ ವಿಚಾರಣೆ ವೇಳೆ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಿದ್ರು

Advertisements

ಡಿಸ್ಪುರ್: ಮಹಿಳೆಯನ್ನು ಹತ್ಯೆಗೈದ ಆರೋಪದಡಿ ಸಾರ್ವಜನಿಕ ವಿಚಾರಣೆ ವೇಳೆ ವ್ಯಕ್ತಿಯೊಬ್ಬನನ್ನು ಜೀವಂತವಾಗಿ ಸುಟ್ಟು ಹತ್ಯೆಗೈದಿರುವ ಅಮಾನವೀಯ ಘಟನೆ ಮಧ್ಯ ಅಸ್ಸಾಂನ ನಾಗಾನ್ ಜಿಲ್ಲೆಯ ಬೋರ್ ಲಾಲುಂಗ್ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಪ್ರಮುಖ ಆರೋಪಿ ರಂಜಿತ್ ಬೊರ್ಡೊಲೊಯ್ ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಸಬಿತಾ ಪಟೋರ್ ಎಂಬ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದರು. ಈ ಹತ್ಯೆಯ ಹಿಂದೆ ಗ್ರಾಮದ ಮತ್ತೋರ್ವ ಮಹಿಳೆ, ರಂಜಿತ್ ಬೊರ್ಡೊಲೊಯ್ ಸೇರಿದಂತೆ ಐದು ಜನರ ಗುಂಪಿನ ಕೈವಾಡ ಇದೆ ಎಂಬ ಮಾತುಗಳು ಕೇಳಿಬಂದಿತ್ತು. ಹೀಗಾಗಿ ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಇದನ್ನೂ ಓದಿ:  ಪೊಲೀಸ್ ವಾಹನದಲ್ಲಿ ಕುರಿ ದರ್ಬಾರ್ – ಮುಗ್ದ ಪ್ರಾಣಿಯ ಜಾಲಿ ರೈಡ್ ನೋಡಿ ನೆಟ್ಟಿಗರು ಫಿದಾ

crime

ಈ ವೇಳೆ ಬೋರ್ಡೊಲೋಯ್ ಪಾಟರ್ ಮಹಿಳೆಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಆತನನ್ನು ಮರಕ್ಕೆ ಕಟ್ಟಿ ಹಾಕಿ ಜೀವಂತವಾಗಿ ಸುಟ್ಟು ಹಾಕಿ ಹೂತು ಹಾಕಿದ್ದಾರೆ ಎನ್ನಲಾಗಿದೆ. ಇದೀಗ ಪೊಲೀಸರು ಮೃತ ವ್ಯಕ್ತಿಯ ಶವವನ್ನು ಹೊರಗೆ ತೆಗೆದಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರು ಹೊಟ್ಟೆಗಲ್ಲ, ಕಣ್ಣಿಗೆ ಎಣ್ಣೆ ಬಿಟ್ಕೊಂಡು ಕೆಲಸ ಮಾಡಬೇಕು: ಸಿ.ಟಿ ರವಿ

ಸದ್ಯ ಮೃತ ವ್ಯಕ್ತಿಯ ಶವವನ್ನು ವಶಕ್ಕೆ ಪಡೆದಿದ್ದೇವೆ. ಈ ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಈ ಬಗ್ಗೆ ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Live Tv

Leave a Reply

Your email address will not be published.

Back to top button