ಚಾಮರಾಜನಗರ: ಸಾಂಸಾರಿಕ ಜೀವನದಲ್ಲಿ ಕಲಹದಿಂದಾಗಿ ವಿಷ ಕುಡಿದು ವ್ಯಕ್ತಿಯೋರ್ವ ERSS-112 ಕರೆ ಮಾಡಿ ರಕ್ಷಣೆಗೊಳಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಆಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿದ್ದ ವೇಳೆ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದಾನೆ. ಮಧ್ಯರಾತ್ರಿಯಲ್ಲಿ ತಾನು ಸಾಂಸಾರಿಕ ವಿಚಾರದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿರುವುದಾಗಿ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾನೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಹೊಯ್ಸಳ ವಾಹನದ ಪೊಲೀಸರು ವ್ಯಕ್ತಿಯನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಡಿಸಿ ವಿರುದ್ಧ ಡಿಕೆಶಿ ಕಿಡಿ
ಈಗಾಗಲೇ ಆತ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಈ ಕುರಿತು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ವ್ಯಕ್ತಿಯನ್ನು ರಕ್ಷಣೆ ಮಾಡಿರುವ ಕುರಿತು ಫೇಸ್‍ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಕಲಿ ದಾಖಲೆ ಸೃಷ್ಟಿ ಆರೋಪ- ದಂಪತಿಯ ವಿಚಾರಣೆ