ವಿಜಯಪುರ: ಸಾಲದ ಹಣ ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿಹಾಕಿರುವ ಅಮಾನವೀಯ ಘಟನೆ ಜಿಲ್ಲೆಯ ಚಡಚಣ (Chadachan) ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ನಡೆದಿದೆ.
ಕುಮಾರ್‌ಗೌಡ ಬಿರಾದಾರ್ ಎಂಬಾತ ಓರ್ವ ವ್ಯಕ್ತಿಯ ಕಾಲಿಗೆ ಸರಪಳಿ ಕಟ್ಟಿ ಅಮಾನುಷವಾಗಿ ನಡೆದುಕೊಂಡಿದ್ದಾನೆ.ಇದನ್ನೂ ಓದಿ: ಮೈದುನನ ಜೊತೆ ಲವ್ವಿಡವ್ವಿ – ಪತಿ ಕೊಂದು ಆಕಸ್ಮಿಕ ಸಾವು ಅಂತ ಬಿಂಬಿಸಿದ್ದ ಮಹಿಳೆ ಬಂಧನ
ಕುಮಾರ್‌ಗೌಡನ ಬಳಿ ವ್ಯಕ್ತಿಯೋರ್ವ 20 ಸಾವಿರ ರೂ. ಸಾಲ ಪಡೆದಿದ್ದ. ಇದೀಗ ಸಾಲದ ಹಣವನ್ನು ವಾಪಸ್ ಕೊಡದಿದ್ದಕ್ಕೆ ಆತನ ಕಾಲಿಗೆ ಸರಪಳಿ ಹಾಕಿ ಕಂಬಕ್ಕೆ ಕಟ್ಟಿ ಹಾಕಿದ್ದಾನೆ. ಕುಮಾರ್ ಗೌಡನ ಈ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್ – ಆ.24ರವರೆಗೆ ವಿಸ್ತರಿಸಿದ ಪಾಕ್