ನವದೆಹಲಿ: ಗಂಡನನ್ನು ಹತ್ಯೆ ಮಾಡುವುದಾಗಿ ಹೆದರಿಸಿ ವ್ಯಕ್ತಿಯೊಬ್ಬ 52 ವಯಸ್ಸಿನ ವೃದ್ಧೆ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ನಿರಂತರವಾಗಿ ಅತ್ಯಾಚಾರ (Rape) ಎಸಗಿರುವ ಘಟನೆ ಗುರುಗಾವ್ನಲ್ಲಿ ನಡೆದಿದೆ.
ಆರೋಪಿಯು ತನ್ನ ಪತಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಮನೆಗೆಲಸಕ್ಕೂ ಸಹಾಯ ಮಾಡುತ್ತಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಕುಟುಂಬಕ್ಕೆ ಎರಡೇ ಮಕ್ಕಳು: ಜನಸಂಖ್ಯಾ ನಿಯಂತ್ರಣ ನೀತಿ ಜಾರಿಯಾಗುತ್ತಾ?
Advertisement
Advertisement
ಡಿಸೆಂಬರ್ 10, 2019 ರಂದು ನಾನು ಮನೆಯಲ್ಲಿ ಒಬ್ಬಳೇ ಇದ್ದಾಗ, ಚಾಲಕ ನನ್ನ ಕೋಣೆಗೆ ಪ್ರವೇಶಿಸಿ ಕಿರುಕುಳ ನೀಡಿದ್ದಾನೆ. ವಿರೋಧಿಸಿದಾಗ ಆರೋಪಿಯು ನಿನ್ನ ಪತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ನಂತರ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ವೃದ್ಧೆ ಆರೋಪಿಸಿದ್ದಾರೆ.
Advertisement
ಆರೋಪಿಯು ಒಂದು ವರ್ಷಕ್ಕೂ ಹೆಚ್ಚು ಕಾಲ ತನ್ನ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ವಿರೋಧಿಸಿದಾಗಲೆಲ್ಲ ಆಕೆಯ ಪತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಬಂಧನ
Advertisement
ಈ ಸಂಬಂಧ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಸೆಕ್ಟರ್ 51ರ ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.