ಮಂಡ್ಯ | ಗಣೇಶ ಮೆರವಣಿಗೆ ವೇಳೆ ಡಿಜೆ ಸೌಂಡ್‌ಗೆ ಕುಣಿಯುತ್ತಿದ್ದ ವ್ಯಕಿ ಹೃದಯಾಘಾತಕ್ಕೆ ಬಲಿ

Public TV
1 Min Read
man collapses dies of heart attack while ganesh procession in mandya 2

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ (Ganesha Procession) ವೇಳೆ ಡ್ಯಾನ್ಸ್‌ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಡಿಜೆ ಸೌಂಡ್‌ನಿಂದ ಹೃದಯಾಘಾತಕ್ಕೆ (Heart Attack) ಬಲಿಯಾದ ಘಟನೆ ಕೆಆರ್‌ಪೇಟೆಯ (KR Pete) ಜೊತ್ತನಪುರ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮಂಜುನಾಥ್ (55) ಎಂದು ಗುರುತಿಸಲಾಗಿದೆ. ಗಣೇಶ ಹಬ್ಬದಂದು ಜೊತ್ತನಪುರ ಗ್ರಾಮದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಭಾನುವಾರ ಗಣೇಶ ಮೂರ್ತಿಯ ವಿಸರ್ಜನೆಗೂ ಮುನ್ನ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಗ್ರಾಮಸ್ಥರು ಬಣ್ಣ ಹಾಕಿಕೊಂಡು ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದರು. ಇದನ್ನೂ ಓದಿ: ಮೈಸೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕುಸಿದುಬಿದ್ದು ವ್ಯಕ್ತಿ ಸಾವು

ಗ್ರಾಮಸ್ಥರೊಂದಿಗೆ ಮಂಜುನಾಥ್ ಸಹ ಕುಣಿದು ಕುಪ್ಪಳಿಸಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಎದೆ ಹಿಡಿದುಕೊಂಡು ಅವರು ಕುಸಿದುಬಿದ್ದಿದ್ದಾರೆ. ಜೊತೆಯಲ್ಲಿ ಇದ್ದವರು ನೋಡುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ವ್ಯಕ್ತಿ ಸಾವು

Share This Article