ಲಕ್ನೊ: ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ವೇದಿಕೆ ಮೇಲೆಯೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಮೃತರನ್ನು ಮೂಲತಃ ಮುಂಬೈನ ಟ್ರಾವೆಲ್ ಉದ್ಯಮಿ ವಿಷ್ಣು ಪಾಂಡೆ ಎಂದು ಗುರುತಿಸಲಾಗಿದೆ. ಇವರು ವೇದಿಕೆ ಮೇಲೆ ಡ್ಯಾನ್ಸ್ ಮಾಡುತ್ತಾ ಮಾಡುತ್ತಾ ಮೃತಪಟ್ಟಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಆಗ್ರಾದ ಖಾಸಗಿ ಹೊಟೇಲ್ ಒಂದರಲ್ಲಿ ಟ್ರಾವೆಲ್ ಏಜೆನ್ಸಿ ಕಾರ್ಯಕ್ರಮ ಏರ್ಪಡಿಸಿತ್ತು. ದೇಶದ ಅನೇಕ ಉದ್ಯಮಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅದರಲ್ಲಿ ಟ್ರಾವೆಲ್ ಉದ್ಯಮಿ ವಿಷ್ಣು ಕೂಡ ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ವಿಷ್ಣು ಗೋಲ್ಡನ್ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಇದನ್ನು ಹೇಳುತ್ತಿದ್ದಂತೆ ಉದ್ಯಮಿ ಖುಷಿಯಿಂದ ಡಾನ್ಸ್ ಮಾಡುತ್ತಾ ವೇದಿಕೆ ಮೇಲೆ ಹೋಗಿದ್ದಾರೆ. ವೇದಿಕೆ ಮೇಲೆಯೂ ಡಾನ್ಸ್ ಮಾಡುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಡಾನ್ಸ್ ಮಾಡುತ್ತಾ ಮಾಡುತ್ತಾ ಕೆಳಗೆ ಬಿದ್ದಿದ್ದಾರೆ.
ತಕ್ಷಣ ಉದ್ಯಮಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ 16 ನಿಮಿಷದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.