ಬೆಂಗಳೂರು: ಸೈಟ್ ವಿಚಾರದ ತನಿಖೆ ಹೆಸರಿನಲ್ಲಿ ಪೊಲೀಸ್ ಅಧಿಕಾರಿಯು ಕಿರುಕುಳ ನೀಡುತ್ತಿದ್ದರು ಎಂದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಮಾಕ್ಷಿಪಾಳ್ಯದ (Kamakshipalya) ಶ್ರೀನಿವಾಸನಗರದಲ್ಲಿ ನಡೆದಿದೆ.
ಶ್ರೀನಿವಾಸನಗರದ ಮಹದೇವಯ್ಯ ಮೃತ ದುರ್ದೈವಿ. ಇದನ್ನೂ ಓದಿ: ಹುಬ್ಬಳ್ಳಿ ಅರಣ್ಯ ಇಲಾಖೆಯಲ್ಲಿ ಭ್ರಷ್ಟಾಚಾರ – ಪಾರ್ಕ್ ಪ್ರವೇಶ ಶುಲ್ಕವನ್ನೂ ಬಿಡದ ಅರಣ್ಯ ಸಿಬ್ಬಂದಿ
Advertisement
Advertisement
ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಮಹದೇವಯ್ಯ ವಿರುದ್ಧ ಕಳೆದ ಫೆಬ್ರವರಿಯಲ್ಲಿ ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಶಿವಶಂಕರ್ ಎಂಬುವವರು ಮಹದೇವಯ್ಯ ವಿರುದ್ಧ ದೂರು ನೀಡಿದ್ದರು. ಪ್ರಕರಣ ಸಂಬಂಧ ಮಹದೇವಯ್ಯ ಜಾಮೀನು ಪಡೆದ ಬಳಿಕ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ವೇಳೆ ರಾಜಗೋಪಾಲನಗರ ಠಾಣೆ ಇನ್ಸ್‌ಪೆಕ್ಟರ್ ಕಿರುಕುಳ ನೀಡಿದ್ದರು. ತನಿಖೆ ಹೆಸರಲ್ಲಿ 15 ದಿನಗಳಿಂದ ಠಾಣೆಗೆ ಕರೆಸಿ ಟಾರ್ಚರ್ ಮಾಡುತ್ತಿದ್ದರು. ಊರುಬಿಟ್ಟು ಹೋಗಿ, ಇಲ್ಲದಿದ್ದರೆ ಹೇಳಿದವರಿಗೆ ಸೈಟ್ ರಿಜಿಸ್ಟರ್ ಮಾಡಿ ಎಂದು ಬೆದರಿಕೆ ಹಾಕುತ್ತಿದ್ದರು ಎಂದು ಮಹದೇವಯ್ಯ ಪತ್ನಿ ಆರೋಪಿಸಿದ್ದಾರೆ. ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
Advertisement
ಬುಧವಾರ ಸಂಜೆ ಮಹದೇವಯ್ಯ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಮಹದೇವಯ್ಯ ಸಾವಿಗೆ ರಾಜಗೋಪಾಲನಗರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರ ಯುಪಿಯಲ್ಲಿ ಅರೆಸ್ಟ್
Advertisement
ಇನ್ಸ್‌ಪೆಕ್ಟರ್ ಸೇರಿ ನಾಲ್ವರ ವಿರುದ್ಧ ಮಹದೇವಯ್ಯ ಪತ್ನಿ ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದಾರೆ.