ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಕುಡಿಯೋ ನೀರಿನ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ

Public TV
1 Min Read
man commits suicide by falling water tank in Bidar

– ಗ್ರಾಮದ ಜನರಿಗೆ ಅನಾರೋಗ್ಯದ ಭೀತಿ

ಬೀದರ್: ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾ ಘಟನೆ ಬೀದರ್ (Bidar) ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ. ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ದಾಸರ್ (27) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆಯೇ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕ್‍ನ್ನು ಜನ ಪರಿಶೀಲಿಸಿದಾಗ ದಾಸರ್‍ನ ಮೃತದೇಹ ಪತ್ತೆಯಾಗಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ. ಇದನ್ನೂ ಓದಿ: ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ -‌ ರಾಜ್ಯದ 58 ಕಡೆ ದಾಳಿ

ಕುಡಿಯುವ ನೀರಿನಲ್ಲಿ ಶವ ಪತ್ತೆಯಾದ ಹಿನ್ನೆಲೆ, ಆರೋಗ್ಯ ಇಲಾಖೆಯ ಸಿಬ್ಬಂದಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಟ್ಯಾಂಕ್ ನೀರು ಕುಡಿದು ಯಾರಿಗಾದರೂ ಆರೋಗ್ಯದ ಸಮಸ್ಯೆಯಾದರೆ ಅಗತ್ಯ ಚಿಕಿತ್ಸೆ ಪಡೆಯುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ (Janavada Police) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಕ್ರಮ ಸಾಗಾಟ – 4 ಲಕ್ಷ ಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ ಜಪ್ತಿ

Share This Article