ನೋಯ್ಡಾ: ಕಟ್ಟಡದ 43ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿ ಸಮೀಪದ ನೋಯ್ಡಾದಲ್ಲಿರುವ (Noida) ಸೂಪರ್ನೋವಾ (Supernova) ಕಟ್ಟಡದಲ್ಲಿ ನಡೆದಿದೆ.
ಸೆಕ್ಟರ್ 94ರ ಸೂಪರ್ನೋವಾ ಸಂಕೀರ್ಣದಲ್ಲಿರುವ ಸ್ಪೈರಾ ಟವರ್ನಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು 43ನೇ ಮಹಡಿಯಿಂದ ಜಿಗಿಯುತ್ತಿರುವುದು ಕಂಡುಬಂದಿದೆ. ಈ ವೇಳೆ ಮತ್ತೊಬ್ಬ ವ್ಯಕ್ತಿ ಅವರನ್ನು ತಡೆಯಲು ಪ್ರಯತ್ನಿಸಿದ್ದು, ರೇಲಿಂಗ್ನಿಂದ ದೂರ ಎಳೆಯಲು ಯತ್ನಿಸಿದ್ದಾರೆ. ಆದರೆ ಅವರ ಮಾತನ್ನು ಕೇಳದ ವ್ಯಕ್ತಿ ಕೆಳಗೆ ಜಿಗಿದಿದ್ದಾರೆ. ಇದನ್ನೂ ಓದಿ: SIR ಪಾಲಿಟಿಕ್ಸ್ – ಪೇದೆಗೆ ಬೆಳಗಾವಿ ಶಾಸಕ ಅಭಯ್ ಪಾಟೀಲ್ ಕ್ಯಾಮೆರಾ ಮುಂದೆಯೇ ಕ್ಲಾಸ್
ಪೊಲೀಸರ ಪ್ರಕಾರ, ಕೆಳಗೆ ಬಿದ್ದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಹರಿಯಾಣದ ಮಾನೇಸರ್ ನಿವಾಸಿ ಸಂಭವ್ ಜೈನ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಸಂಭವ್ ಜೈನ್ ಶುಕ್ರವಾರ ಕಟ್ಟಡದಲ್ಲಿರುವ ಏರ್ಬಿಎನ್ಬಿ ವಸತಿಗೃಹಕ್ಕೆ ಬಂದು ತಂಗಿದ್ದರು. ಶನಿವಾರ ಮಧ್ಯಾಹ್ನದ ವೇಳೆಗೆ ಅವರು ಅಲ್ಲಿಂದ ತೆರಳಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಬಾಲ್ಕನಿಯಿಂದ ಜಿಗಿದಿದ್ದಾರೆ. 43ನೇ ಮಹಡಿಯಿಂದ ಜಿಗಿದ ಪರಿಣಾಮ ದೇಹ ಛಿದ್ರಛಿದ್ರಗೊಂಡಿದೆ. ಇದನ್ನೂ ಓದಿ: ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್
ಜಿಗಿಯುವ ಮುನ್ನ ಜೈನ್ ತಮ್ಮ ತಂದೆಗೆ ಹಲವು ಬಾರಿ ಕರೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಅವರ ಕುಟುಂಬಕ್ಕೆ ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸ್ಥಳವನ್ನು ಪೊಲೀಸರು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಪರಿಶೀಲಿಸಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಇದನ್ನೂ ಓದಿ: ಉಡುಪಿ ನಗರಸಭೆ ವ್ಯಾಪ್ತಿಯ ಮೂಲಸೌಕರ್ಯ ಅಭಿವೃದ್ಧಿಗೆ 30 ಕೋಟಿ ರೂ. ವಿಶೇಷ ಅನುದಾನಕ್ಕೆ ಮನವಿ
ಘಟನೆಯ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸ್ಥಳ ಹಾಗೂ ಸುತ್ತಮುತ್ತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿದ್ದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮೃತ ವ್ಯಕ್ತಿ ತೀವ್ರ ಆರ್ಥಿಕ ಒತ್ತಡದಲ್ಲಿದ್ದರು ಎಂಬ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ
ಸೂಪರ್ನೋವಾ ಕಟ್ಟಡದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ ಎಂದು ತಿಳಿದುಬಂದಿದೆ. ಎನ್ಸಿಆರ್ ಪ್ರದೇಶದ ಅತ್ಯಂತ ಎತ್ತರದ ವಸತಿ ಕಟ್ಟಡವಾಗಿರುವ ಸೂಪರ್ನೋವಾದಲ್ಲಿ ಒಟ್ಟು 68 ಮಹಡಿಗಳಿವೆ. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಟ್ರೆಕ್ಕಿಂಗ್ ವೇಳೆ ಈಜಲು ಹೋದ ಟೆಕ್ಕಿ ನಾಪತ್ತೆ

