ಮುಂಬೈ: ಮರಾಠ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ, ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಔರಂಗಬಾದ್ ನಲ್ಲಿ ನಡೆದಿದೆ.
ಪ್ರಮೋದ್ ಜೈಸಿಂಗ್ ಹೋರೆ (35) ಆತ್ಯಹತ್ಯೆ ಮಾಡಿಕೊಂಡ ವ್ಯಕ್ತಿ. ಮರಾಠ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿಗಾಗಿ ಒತ್ತಾಯಿಸಿ, ಪ್ರಮೋದ್ ಚಲಿಸುತ್ತಿದ್ದ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Advertisement
ಭಾನುವಾರವಷ್ಟೇ ಮೃತ ಪ್ರಮೋದ್, ಮರಾಠ ಸಮುದಾಯಕ್ಕೆ ಮೀಸಲಾತಿಗಾಗಿ ಒತ್ತಾಯಿಸಿ ಬೆಂಬಲ ಸೂಚಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ಫೇಸ್‍ಬುಕ್ ಮತ್ತು ವಾಟ್ಸಪ್ ನಲ್ಲಿ ಬರೆದುಕೊಂಡಿದ್ದ ಎಂದು ಮುಕುಂಗ್‍ವಾಡಿ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ನಾಥಾ ಜಾಧವ್ ತಿಳಿಸಿದ್ದಾರೆ.
Advertisement
ಭಾನುವಾರ ರಾತ್ರಿ ಮುಕುಂದವಾಡಿ ಪ್ರದೇಶದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಮೋದ್ ಮಹಾರಾಷ್ಟ್ರ ಲೋಕಸೇವಾ ಆಯೋಗದ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು. ಪ್ರಮೋದ್ ಆತ್ಮಹತ್ಯೆಗೂ ಮುನ್ನ ತನ್ನ ಫೇಸ್‍ಬುಕ್ ಹಾಗೂ ವಾಟ್ಸಪ್ ಗಳಲ್ಲಿ “ಇಂದು ಮರಾಠ ಸಮುದಾಯದ ಒಬ್ಬರು ಹೋಗುತ್ತಿದ್ದಾರೆ. ಮರಾಠ ಸಮುದಾಯಕ್ಕೆ ಮೀಸಲಾತಿ ಕೊಡಿ. ಮರಾಠ ಮೀಸಲಾತಿ ಒಂದು ಜೀವವನ್ನು ತೆಗೆದುಕೊಳ್ಳುತ್ತದೆ” ಎಂದು ಬರೆದುಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
ಈ ಪೋಸ್ಟ್ ನೋಡಿ ಹಲವಾರು ಸ್ನೇಹಿತರು ಪ್ರಮೋದ್ ಬಳಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಮರುದಿನ ಪ್ರಮೋದ್ ಶವ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.