ಚಾಮರಾಜನಗರ: ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡಿಂಗ್ ರೀಲ್ಸ್ (Trending Reels) ಅಂದ್ರೆ ಅದು ಕರಿಮಣಿ ಮಾಲೀಕ ನೀನಲ್ಲ (Karimani Malika Neenalla). ಈ ರೀಲ್ಸ್ (Wife Reels) ಇದೀಗ ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಮದ ಕುಮಾರ್ (33) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕುಮಾರ್ ಪತ್ನಿ ರೂಪಾ ಗುಂಡಾಲ್ ಜಲಾಶಯಕ್ಕೆ ಹೋಗಿದ್ದ ವೇಳೆ ಸೋದರ ಮಾವ ಗೋವಿಂದ ಹಾಗೂ ಸಹೋದರಿ ದೀಪಾ ಜೊತೆಗೆ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿದ್ದರು. ಇದನ್ನೂ ಓದಿ: ಫ್ಲಾಟ್ಗೆ ಕರೆಸಿಕೊಂಡು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ನಾಲ್ವರ ಬಂಧನ
Advertisement
Advertisement
ಈ ರೀಲ್ಸ್ ಗೂ ಮುನ್ನಾ ಪತಿ ಕುಮಾರ್ ಹಾಗೂ ಪತ್ನಿ ರೂಪಾ ನಡುವೆ ಹಲವು ಬಾರಿ ಕೌಟುಂಬಿಕ ಕಲಹ ನಡೆದಿತ್ತು. ರೀಲ್ಸ್ ಮಾಡದಂತೆ ಹಲವು ಸಲ ಎಚ್ಚರಿಕೆ ಕೂಡ ನೀಡಿದ್ದರು. ಆದರೆ ಇದನ್ನೂ ಲೆಕ್ಕಿಸದೆ ರೂಪಾ ರೀಲ್ಸ್ ಮಾಡಿದ್ದರು. ರೂಪಾ ರೀಲ್ಸ್ ನೋಡಿದ್ದ ಕುಮಾರ್ ಸ್ನೇಹಿತರು ರೇಗಿಸಿದ್ದರು. ಇದರಿಂದ ಮನಸ್ಸಿಗೆ ಕುಮಾರ್ ಬೇಸರಗೊಂಡಿದ್ದರು. ಪತ್ನಿಯ ಬಳಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಕೂಡ ಮಾಡಿಕೊಂಡಿದ್ದರಂತೆ. ಪತ್ನಿ ರೂಪಾ ಕುಮಾರ್ ಮಾತಿಗೆ ಸೊಪ್ಪು ಹಾಕಿಲ್ಲವೆಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
Advertisement
ಕುಮಾರ್ ಕುಟುಂಬಸ್ಥರು ರೂಪಾ, ಯಶೋದಾ, ಗೋವಿಂದ ಮೂವರ ಮೇಲೂ ದೂರು ಕೊಟ್ಟಿದ್ದಾರೆ. ಮೂವರು ನಮ್ಮ ಅಣ್ಣನ ಸಾವಿಗೆ ಕಾರಣರಾಗಿದ್ದು, ಪ್ರಕರಣ ದಾಖಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಹಿಂದೆಯೂ ಕೂಡ ರೂಪಾ ಹಾಗೂ ಕುಮಾರ್ ನಡುವೆ ಕಲಹ ನಡೆದಿತ್ತು. ಆ ವೇಳೆಯೂ ಆತ್ಮಹತ್ಯೆಗೆ ಯತ್ನಿಸಿದ್ದನು. ನಂತರ ಎಲ್ಲಾ ಸೇರಿ ಬಿಡಿಸಿದ್ದೇವು. ಈಗ ಮತ್ತೆ ರೀಲ್ಸ್ ಹಾಗೂ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದು ಮನನೊಂದು ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ದೂರು ಕೊಟ್ಟಿದ್ದಾರೆ.
Advertisement
ಒಟ್ಟಿನಲ್ಲಿ ರೀಲ್ಸ್ ಹುಚ್ಚಿನಿಂದ ಪತಿಯ ಪ್ರಾಣ ಪಕ್ಷಿ ಹಾರಿಹೋಗಿದೆ.