ಕೋವಿಯಲ್ಲಿ ತಲೆಗೆ ಗುಂಡು ಹೊಡೆದುಕೊಂಡು ಯುವಕ ಸಾವು

Public TV
1 Min Read
MANGALURU SUICIDE

ಮಂಗಳೂರು: ಯುವಕನೊಬ್ಬ ಕೋವಿಯಿಂದ ತಲೆಗೆ ಗುಂಡು ಹೊಡೆದುಕೊಂಡು ಮೃತಪಟ್ಟ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ (Sullia) ತಾಲೂಕಿನ ಉಬರಡ್ಕ (Ubaradka) ಎಂಬಲ್ಲಿ ನಡೆದಿದೆ.

ಅರಂತೋಡು ನಿವಾಸಿ ರವಿ (32) ಮೃತ ಯುವಕ. ಇವರು ಉಬರಡ್ಕ ಗ್ರಾಮದ ಬೆಳ್ರಂಪಾಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳ್ರಂಪಾಡಿಯಲ್ಲಿ ತೋಟದ ಕೆಲಸಕ್ಕೆ ಬಂದಿದ್ದ ಯುವಕ ಮಂಗಳವಾರ ರಾತ್ರಿ ಮನೆಯಿಂದ ಕೋವಿ ಹಿಡಿದು ಗುಡ್ಡಕ್ಕೆ ಹೋಗಿ ಈ ಕೃತ ಎಸಗಿದ್ದಾರೆ. ಇದನ್ನೂ ಓದಿ: ನದಿಗೆ ಉರುಳಿದ ಮದುವೆ ಮನೆಗೆ ತೆರಳುತ್ತಿದ್ದ ಟ್ರಕ್- ಐವರ ದರ್ಮರಣ

ಕೆಲಸಮಯದಿಂದ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ರಾತ್ರಿಯೇ ಪೊಲೀಸರು ಬಂದು ಮಹಜರು ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

Share This Article