ಕಲಬುರಗಿ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕಾರಿನಿಂದ ಕಾರಿಗೆ ಡಿಕ್ಕಿ ಹೊಡೆದು ಫಿಲ್ಮಿ ಸ್ಟೈಲಿನಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಕಲಬುರಗಿ ಹೊರವಲಯದ ಸಿರಸಗಿ ಮಡಿ ಬಳಿ ಸೋಮವಾರ ತಡರಾತ್ರಿ ನಡೆದಿದೆ.
ಶಿವಲಿಂಗ್ ಕೊಲೆಯಾದ ವ್ಯಕ್ತಿ. ಶಿವಲಿಂಗ್ ಕೊಲೆಯ ಹಿಂದೆ ಕಾಂಗ್ರೆಸ್ ಜಿಲ್ಲಾ ಪಂಚಾಯ್ತಿ ಸದಸ್ಯ ಶಾಂತಪ್ಪ ಕೂಡಲಗಿ ಸೇರಿದಂತೆ ಹಲವರ ಕೈವಾಡ ಇದೆ ಎಂದು ಶಿವಲಿಂಗ್ ಸಂಬಂಧಿಕರು ಆರೋಪ ಮಾಡುತ್ತಿದ್ದಾರೆ.
ಇತ್ತೀಚೆಗೆ ಗ್ರಾಮದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಕೊಲೆಯಾದ ಶಿವಲಿಂಗ್ ಜೈಲಿಗೆ ಹೋಗಿ ಸೋಮವಾರ ಜಾಮೀನಿನ ಮೇಲೆ ಬಂದಿದ್ದನು. ಈ ವಿಷಯ ತಿಳಿದು ಶಾಂತಪ್ಪ ಸಂಬಂಧಿಕರು ಮಾರಕಾಸ್ತ್ರಗಳಿಂದ ಶಿವಲಿಂಗ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.
ಈ ಕುರಿತು ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಶಾಂತಪ್ಪ ಕೂಡಲಗಿ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ.