ರಾಯಚೂರು: ವ್ಯಕ್ತಿಯೊಬ್ಬ ಕಾಲುನೋವು ತಾಳಲಾಗದೆ ಮರ್ಮಾಂಗವನ್ನೆ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಲಕ್ಷಣ ಸುದ್ದಿ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ.
ಜಿಲ್ಲೆಯ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ಗ್ವಾನಪ್ಪ ತನ್ನ ಕಾಲುನೋವನ್ನು ತಾಳಲಾಗದೆ ಮರ್ಮಾಂಗವನ್ನೆ ಕತ್ತರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಮಹಿಳೆಯರು ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು: ಜೊಲ್ಲೆ ಕರೆ
ಏನಿದು ಘಟನೆ?
ಗ್ವಾನಪ್ಪ ಅವರು ಹಲವು ದಿನಗಳಿಂದ ಗ್ಯಾಂಗ್ರಿನ್ ಸಮಸ್ಯೆ, ಕಾಲು ನೋವಿನಿಂದ ಬಳಲುತ್ತಿದ್ದರು. ಆದರೆ ಗ್ವಾನಪ್ಪ ಅವರಿಗೆ ಸೂಕ್ತ ಚಿಕಿತ್ಸೆ ಸಿಗದೇ ನರಳುತ್ತಿದ್ದರು. ಅವರಿಗೆ ಕಾಲುನೋವಿನ ಬಾಧೆ ವಿಪರೀತವಾದ ಹಿನ್ನೆಲೆ ನೋವು ತಾಳದೆ ತನ್ನ ಮರ್ಮಾಂಗವನ್ನೆ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೂಕ್ತ ಚಿಕಿತ್ಸೆ ಸಿಗುವ ಭರವಸೆಯಿಲ್ಲದ ಹಿನ್ನೆಲೆ ನೋವನ್ನ ಸಹಿಸಿಕೊಳ್ಳಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಪ್ರಸ್ತುತ ಪ್ರಕರಣ ಕವಿತಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ: ‘ಕೊನೆಗೂ ಸಾಧಿಸಿದ್ವಿ’ – ರಷ್ಯಾ ಟ್ಯಾಂಕ್ ತೆಗೆದುಕೊಂಡು ಜಾಲಿ ರೈಡ್ ಮಾಡಿದ ಉಕ್ರೇನಿ ಪ್ರಜೆಗಳು!