ಬೆಂಗಳೂರು: ನೆಲಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಡಕಿಮಾರನಹಳ್ಳಿ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಪಾದಚಾರಿ ಮೃತಪಟ್ಟಿದ್ದಾರೆ.
ಅಡಕಿಮಾರನಹಳ್ಳಿ ಬಳಿ ಆಟೋ ಅಪಘಾತವಾಗಿತ್ತು. ಆಟೋದಲ್ಲಿರುವ ವ್ಯಕ್ತಿಯ ರಕ್ಷಣೆಗೆಂದು ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ತಮಿಳುನಾಡು ಮೂಲದ ಲಾರಿ ಗುದ್ದಿದೆ. ಗುದ್ದಿದ ರಭಸಕ್ಕೆ ಸುಮಾರು 10 ಅಡಿಯಷ್ಟು ದೂರ ವ್ಯಕ್ತಿಯನ್ನು ಎಳೆದುಕೊಂಡು ಹೋಗಿದೆ. ಈ ವೇಳೆ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ನಂತರ ಲಾರಿ ಚಾಲಕ ಲಾರಿಯನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಸದ್ಯಕ್ಕೆ ಮೃತ ವ್ಯಕ್ತಿಯ ವಿವರಗಳು ತಿಳಿದು ಬಂದಿಲ್ಲ.
ಈ ಕುರಿತು ಪೊಲೀಸರು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv