ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿಯಾಗಿದೆ. ಈ ಮೂಲಕ 15 ದಿನಗಳ ಅಂತರದಲ್ಲಿ ಎರಡನೇ ಬಲಿ ಇದಾಗಿದೆ.
ಕೊಪ್ಪ ತಾಲೂಕಿನ ದೋಣಿಹಡ್ಲು ಗ್ರಾಮದ ಮಂಜುನಾಥ್ (45) ಕಾಡುಕೋಣ ದಾಳಿಗೆ ಬಲಿಯಾದ ದುರ್ದೈವಿ. ಮನೆಯಿಂದ ತೋಟಕ್ಕೆ ಹೋಗುವಾಗ ಕಾಡುಕೋಣ ಏಕಾಏಕಿ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತು. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿರಂತರ ಕಾಡುಕೋಣ ದಾಳಿಯಿಂದ ಸರ್ಕಾರದ ವಿರುದ್ಧ ಮಲೆನಾಡಿಗರು ಆಕ್ರೋಶ ಹೊರಹಾಕಿದ್ದಾರೆ. ಜುಲೈ 7ರಂದು ಕಳಸದಲ್ಲಿ ಕಾಡುಕೋಣ ದಾಳಿಗೆ 52 ವರ್ಷದ ಶೀಲಾ ಎಂಬ ಮಹಿಳೆ ಬಲಿಯಾಗಿದ್ದರು. ಇದನ್ನೂ ಓದಿ: ಪ್ರವಾಸಿಗರೇ ಎಚ್ಚರ.. ಕಾಡಾನೆ ಬಳಿಕ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ
