ಮಂಗಳೂರು: ತ್ರಿಕೋನ ಪ್ರೇಮ ಪ್ರಕರಣದಲ್ಲಿ ಕಲಹ ಉಂಟಾಗಿ ಆತ್ಮಹತ್ಯೆ ಮಾಡಲು ಮುಂದಾದ ಪ್ರೇಯಸಿಯನ್ನು ರಕ್ಷಿಸಲು ಹೋದ ಯುವಕ ತಾನೇ ಬಲಿಯಾದ ಘಟನೆ ಮಂಗಳೂರು ನಗರ ಹೊರವಲಯದ ಸೋಮೇಶ್ವರ ಬೀಚ್‍ನಲ್ಲಿ ನಡೆದಿದೆ. ಮುನ್ನೂರು ಗ್ರಾಮದ ಉಳಿಯ ನಿವಾಸಿ ಲಾಯ್ಡ್ ಡಿಸೋಜ (26) ಸಮುದ್ರಪಾಲಾದ ಯುವಕ.
ಮೃತ ಲಾಯ್ಡ್ ಡಿಸೋಜ ಇಬ್ಬರು ಯುವತಿಯರನ್ನು ಪ್ರೀತಿಸುತ್ತಿದ್ದ. ಈ ಬಗ್ಗೆ ಕಲಹ ಉಂಟಾದಾಗ ಶುಕ್ರವಾರ ಸಂಜೆ ಸೋಮೇಶ್ವರ ಬೀಚ್‍ನಲ್ಲಿ ಮಾತುಕತೆ ನಡೆಸಲು ಮೂವರು ತೆರಳಿದ್ದರು. ಲಾಯ್ಡ್ ಪ್ರೇಯಸಿಯರಾದ ಅಶ್ವಿತಾ ಪೆರಾವೊ ಹಾಗೂ ಡಾಕ್ಲಿನ್ ನಡುವೆ ಮಾತುಕತೆ ವೇಳೆ ಜಗಳ ಏರ್ಪಟ್ಟಿದ್ದು, ಅಶ್ವಿತಾ ನೊಂದು ಸಮುದ್ರಕ್ಕೆ ಹಾರಿದ್ದಾರೆ. ಇದನ್ನೂ ಓದಿ: ಕಚ್ಚಾ ಬದಾಮ್ ಹಾಡಿ ಟ್ರೋಲಾದ ರಾನು ಮಂಡಲ್
Advertisement
Advertisement
ಆಕೆಯನ್ನು ರಕ್ಷಿಸಲು ಲಾಯ್ಡ್ ಕೂಡಾ ಸಮುದ್ರಕ್ಕೆ ಹಾರಿದ್ದ. ಈ ವೇಳೆ ಘಟನೆಯನ್ನು ಗಮನಿಸಿದ ಸ್ಥಳೀಯರು ಅವರಿಬ್ಬರನ್ನು ರಕ್ಷಿಸಲು ಮುಂದಾಗಿದ್ದಾರೆ. ಅಶ್ವಿತಾಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಲಾಯ್ಡ್‍ನನ್ನು ದಡಕ್ಕೆ ತರುವಷ್ಟರಲ್ಲಿ ಆತ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಮರಿಗಳೊಂದಿಗೆ ಪ್ರವಾಸಿಗರನ್ನು ಅಡ್ಡಹಾಕಿದ ಆನೆಗಳು – ಕೆ.ಗುಡಿ ಸಫಾರಿ ವೇಳೆ ಗಜ ಪಡೆ ಎಂಟ್ರಿ
Advertisement
ಘಟನೆಯ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.